ಶಿರಸಿ: ನಗರದಲ್ಲಿ 4 ವರ್ಷದ ಬಾಲಕಿಯ ಅತ್ಯಾಚಾರಕ್ಕೆ ಪ್ರಯತ್ನಿದ ಯುವಕನನ್ನು ಬಂಧಿಸಿ ಪೋಕ್ಸೊ ಪ್ರಕರಣ ದಾಖಲಿಸಲಾಗಿದೆ. ಶಿವು (26) ಎಂಬಾತನೇ ಆರೋಪಿಯಾಗಿದ್ದು ಈತನ ಮೇಲೆ ಪೋಕ್ಸೊ ಪ್ರಕರಣ ದಾಖಲಾಗಿದೆ. ಕಳೆದ ಹಲವು ದಿನಗಳಿಂದ ಬಾಲಕಿಗೆ ದೈಹಿಕ ಹಿಂಸೆ ನೀಡುತ್ತಿದ್ದ ಎಂದು ತಿಳಿದು ಬಂದಿದೆ. ಶಿರಸಿ ಮಾರುಕಟ್ಟೆ ಪೋಲಿಸ್ ಠಾಣೆಯಲ್ಲಿ ಪಿಎಸ್ಐ ಭೀಮಾಶಂಕರ ಪ್ರಕರಣ ದಾಖಲಿಸಿಕೊಂಡಿದ್ದು, ಸಿಪಿಐ ರಾಮಚಂದ್ರ ನಾಯಕ ತನಿಖೆ ಮುಂದುವರೆಸಿದ್ದಾರೆ.

RELATED ARTICLES  ಗಿಣಿ ಕಚ್ಚಿದ ಹಣ್ಣು ಸಿಹಿಯಾಗಿರುವುದು ಯಾಕೆಂದು ಗೊತ್ತಾ?

ಈತ ಶಿರಸಿ ನಗರದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದು ಮನೆಯ ಪಕ್ಕದಲ್ಲೇ ಇದ್ದ ನಾಲ್ಕು ವರ್ಷದ ಹೆಣ್ಣು ಮಗುವಿನ ಮೇಲೆ ಅತ್ಯಾಚಾರ ನಡೆಸಿ ವೈರ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಲು ಯತ್ನಿಸಿದಾಗ,ಮಗು ಅಳುವ ಶಬ್ದ ಕೇಳಿ ಸಾರ್ವಜನಿಕರು ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಸ್ಥಳದಿಂದ ಪರಾರಿಯಾಗಲು ಯತ್ನಿಸಿದಾಗ ಆರೋಪಿಯನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ. ಘಟನೆ ಸಂಬಂದ ಶಿರಸಿ ಮಾರುಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೋಕ್ಲೋ ಕಾಯ್ದೆಯಡಿ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

RELATED ARTICLES  ಇಂದಿನ ನಿಮ್ಮ ದಿನ ಭವಿಷ್ಯ ಹೇಗಿದೆ?ಯಾವ ರಾಶಿಯವರಿಗೆ ಏನು ಫಲ? ಅದೃಷ್ಟ ಸಂಖ್ಯೆ ಯಾವುದು?