ಹೊನ್ನಾವರ : ಸಾವಿಗೆ ಹೆದರದ ಕಾರ್ಯಕರ್ತರು ನಾವು, ಸೋಲಿಗೆ ಹೆದರುತ್ತೇವೆಯೆ? ಎಂದು ಗುಡುಗಿದ ಸಿ.ಟಿ ರವಿ ಕೇಸರಿ ಹೆಗಲ ಮೇಲೆ ಮಾತ್ರವಲ್ಲ, ಹೃದಯದಲ್ಲಿಯೂ ಇರುತ್ತೆ ಎಂದು ಕಾರ್ಯಕರ್ತರ ಸಭೆ ಹಾಗೂ ಅವಲೋಕನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಮುಖರ್ಜಿಯವರ ಉದ್ದೇಶವನ್ನು ಅರವತ್ತಾ ನಾಲ್ಕು ವರ್ಷದ ನಂತರ ನಾವು ಈಢೇರಿಸಿದ್ದೇವೆ. ದೇಶ ಬದಲಾಗಿದೆ. ಮೋದಿ ಎಲ್ಲವನ್ನೂ ಮಾಡಿ ತೋರಿಸಿದೆ ಎಂದರು.
ನಂತರ ಮುಂಬರುವ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1000 ಪ್ರಭಾವಶಾಲಿ ವ್ಯಕ್ತಿಗಳ ಸಂಪರ್ಕದ ಗುರಿ ಹೊಂದಿದ್ದು, ಫಲಾನುಭವಿಗಳ ಸಮಾವೇಶ ನಡೆಯಲಿದೆ. ಸಂಯುಕ್ತ ಮೋರ್ಚಾ ಸಮಾವೇಶದೊಂದಿಗೆ ಪ್ರತಿ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆ ನಡೆಸಿ,ಪ್ರತಿ ಮನೆಮನೆಯನ್ನು ತಲುಪುವ ಉದ್ದೇಶ ಹೊಂದಿದ್ದೇವೆ ಎಂದರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಬೆಲೆ ಏರಿಕೆ ಬಿಸಿಯನ್ನು ಜನ ಅನುಭವಿಸುತ್ತಿದ್ದಾರೆ. ಬೆಲೆ ಏರಿಕೆ ಬಗ್ಗೆ ಚುನಾವಣೆಗೂ ಮುನ್ನ ಸೂಚನೆಯೂ ನೀಡದೇ ಜನತೆಗೆ ಮೋಸಮಾಡಿದೆ. ಗೋಹತ್ಯೆ ನಿಷೇಧ ಕಾಯ್ದೆ ಹಿಂಪಡೆಯಲು, ಮತಾಂತರ ನಿಷೇಧ ಕಾಯ್ದೆ ಹಿಂಪಡೆಯಲು ಕಾಂಗ್ರೆಸ್ ಯೋಚಿಸಿದೆ.ಇವೆಲ್ಲವೂ ರಾಜ್ಯದ ಅಭಿವೃದ್ಧಿಗೆ, ಜನತೆಗೆ ಮಾರಕವಾಗಿದೆ ಎಂದರು.
ಈ ವೇಳೆ ಮಾಜಿ ಸಚಿವರಾದ ಆರಗ ಜ್ಞಾನೇಂದ್ರ, ಕೋಟ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ, ಪ್ರಮೋದ ಮಧ್ವರಾಜ, ಶಾಸಕ ದಿನಕರ ಶೆಟ್ಟಿ, ಸುನಿಲ್ ನಾಯ್ಕ, ರೂಪಾಲಿ ನಾಯ್ಕ ಇನ್ನೂ ಹಲವರು ಉಪಸ್ಥಿತರಿದ್ದರು.