ಹೊನ್ನಾವರ: ಮಹಾರಾಷ್ಟ್ರದಿಂದ ಹೊನ್ನಾವರ ಮಾರ್ಗವಾಗಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಹೊನ್ನಾವರ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಅಂದಾಜು 20 ಕ್ಕಿಂತ ಹೆಚ್ಚು ಎತ್ತುಗಳು ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಅದರಲ್ಲಿ ಒಂದು ಮೃತಪಟ್ಟಿದ್ದು, ಗೋವುಗಳನ್ನು ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತ್ತಿತ್ತು.

RELATED ARTICLES  ಸಮಾಜ ಸೇವೆಗೆ ತನ್ನನ್ನು ತೊಡಗಿಸಿಕೊಂಡಿದೆ ಕುಮಟಾದ ಲಾಯನ್ಸ್ ರೇವಣಕರ ಧರ್ಮಾರ್ಥ ಕಣ್ಣಿನ ಆಸ್ಪತ್ರೆ

ಕಂಟೇನರ್ ಮತ್ತು ಎತ್ತುಗಳನ್ನು ಹೊನ್ನಾವರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.