ಕುಮಟಾ : ನಾವು ಮಾಡುವ ಕಾಯಕ ಯಾವುದೇ ಇರಲಿ ಕಾಯಕದಲ್ಲಿ ಶ್ರದ್ಧೆ ಇದ್ದಾಗ, ಒಳ್ಳೆಯ ಧ್ಯೇಯ ಹೊಂದಿದ್ದಾಗ ಮಾತ್ರ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು ಕುಮಟಾದ ‘ತರಂಗ ಎಲೆಕ್ಟ್ರಾನಿಕ್ಸ್ ‘ನ ಮಾಲಕರಾದ ಶ್ರೀಕಾಂತ್ ಭಟ್ಟ ನುಡಿದರು. ಅವರು ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಸಮಾರಂಭದಲ್ಲಿ ದೀಪ ಬೆಳಗಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಸದಾ ಒಳ್ಳೆಯ ಆಲೋಚನೆಗಳನ್ನು ಹೊಂದಿರಬೇಕು. ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದಾಗ ಸಹಜವಾಗಿಯೇ ಆ ಕಾರ್ಯ ಯಶಸ್ಸಿನಿಂದ ಕೂಡಿರುತ್ತದೆ. ವಿದ್ಯಾರ್ಥಿಗಳು ಸದಾ ಸಾಧನೆಯ ಪಥದಲ್ಲಿ ಸಾಗಬೇಕು. ಎಂದಿಗೂ ಅವರು ಹಣದ ಹಿಂದೆ ಹೋಗಬಾರದು. ಈ ಸುಂದರವಾದ ಪರಿಸರದಲ್ಲಿ ಅವರು ತಮ್ಮ ಮನಸ್ಸನ್ನು ಶುದ್ಧಿಗೊಳಿಸಿಕೊಂಡು ಉತ್ತಮ ಸಂಸ್ಕಾರ ಪಡೆಯುವಂತಾಗಲಿ, ಅಂತೆಯೇ ವೃತ್ತಿಯಲ್ಲಿ ಯಶಸ್ಸು ಗಳಿಸುವಂತಾಗಲಿ ಎಂದು ಅವರು ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಶಾಲಾ ವಿವಿಧ ಸಂಘಗಳ ಲಾಂಛನ ಅನಾವರಣಗೊಳಿಸಿ ಮಾತನಾಡಿದ ವಿದ್ಯಾನಿಕೇತನ ಸಂಸ್ಥೆಯ ಕಾರ್ಯದರ್ಶಿಗಳಾದ ಟಿ. ಎಸ್. ಭಟ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ಒಳ್ಳೆಯ ಯೋಜನೆಯಿಂದ ಯಾವುದೇ ಕಾರ್ಯಗಳು ಯಶಸ್ವಿಯಾಗುತ್ತದೆ. ಅಂತೆಯೇ ಈ ಕಾರ್ಯಕ್ರಮ ಕೂಡ ಯಶಸ್ವಿಯಾಗಲಿ, ಕಳೆದ ೧೩ ವರ್ಷಗಳಿಂದ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರದ ಜೊತೆಗೆ ಮೌಲ್ಯಯುತವಾದ ಶಿಕ್ಷಣ ನೀಡುತ್ತಾ ಬಂದಿರುವ ಈ ಶಾಲೆ ವಿದ್ಯಾರ್ಥಿಗಳ ಪಾಲಿಗೆ ವರದಾನವಾಗಿದೆ. ಇಲ್ಲಿನ ಶಿಕ್ಷಕರ ಪರಿಶ್ರಮದಿಂದ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ದೊರೆಯುತ್ತಿದೆ. ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದುಕೊಂಡು ಜೀವನದಲ್ಲಿ ಉತ್ತಮ ಸಾಧನೆ ಹೊಂದುವAತಾಗಲಿ ಎಂದು ಕರೆ ನೀಡಿದರು.
ವೇದಿಕೆಯ ಮೇಲೆ ಆಡಳಿತ ಮಂಡಳಿಯ ಸದಸ್ಯರಾದ ಆಯ್.ಪಿ. ಭಟ್ಟ, ಜಿ. ವಿ. ಹೆಗಡೆ ಪ್ರಗತಿ ಪಿಯು ಕಾಲೇಜಿನ ಪ್ರಾಚಾರ್ಯರಾದ ಜಿ.ಎಂ. ಭಟ್ಟ, ಮುಖ್ಯಾಧ್ಯಾಪಕ ವಿವೇಕ್ ಆಚಾರಿ, ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಲೋಕೇಶ ಹೆಗಡೆ ಉಪಸ್ಥಿತರಿದ್ದರು.
ಚುನಾಯಿತ ವಿದ್ಯಾರ್ಥಿ ಪ್ರತಿನಿಧಿಗಳಿಗೆ ಶಿಕ್ಷಕ ಅರುಣ್ ನಾಯ್ಕ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ವಿವಿಧ ಸಂಘಗಳ ಕಾರ್ಯದರ್ಶಿಗಳು ಸಂಘದ ಧ್ಯೇಯೋದ್ದೇಶಗಳು ಮತ್ತು ಕ್ರಿಯಾಯೋಜನೆಯನ್ನು ವಾಚಿಸಿದರು. ವಿವೇಕ್ ಆಚಾರಿ ಸ್ವಾಗತಿಸಿದರು. ಶ್ರೀಮತಿ ಗಾಯತ್ರಿ ಹೆಬ್ಬಾರ ವಂದಿಸಿದರು. ಶ್ರೀ ಲೋಕೇಶ್ ಹೆಗಡೆ ಪ್ರಾಸ್ತಾವಿಕ ನುಡಿಯಾಡಿದರು. ವಿದ್ಯಾರ್ಥಿಗಳು ಕಾರ್ಯಕ್ರಮ ನಿರೂಪಿಸಿದರು. ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಪ್ರತಿಭಾ ಹೆಗಡೆ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

RELATED ARTICLES  ವೈರ್ ಖರೀದಿಸಿ ಮೋಸ ಮಾಡಿದ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿ