ಕುಮಟಾ : ಜಿಲ್ಲೆಯಲ್ಲಿ ಭಾರೀ ಮಳೆ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕರಾವಳಿ ತಾಲೂಕುಗಳಾದ ಕುಮಟಾ, ಹೊನ್ನಾವರ, ಭಟ್ಕಳ, ಅಂಕೋಲಾ,‌ ಕಾರವಾರದಲ್ಲಿ ರಜೆ ಘೋಷಣೆ ಮಾಡಲಾಗಿದೆ.

ಇನ್ನು ರಾಜ್ಯದಲ್ಲಿ ಜುಲೈ 10 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಮೀನುಗಾರರು ಕಡಲ ತೀರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

RELATED ARTICLES  ಕೆರೆಯಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳ ಸಾವು..!

ಇಂದು ಸಹ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು ಕಾರವಾರದಿಂದ ಭಟ್ಕಳದವರಿನ ಅನೇಕ ಕಡೆಯಲ್ಲಿ ಜಲಾವೃತವಾಗಿದೆ. ನಾಳೆ ಸಹ ಭಾರೀ ಗಾಳಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ. ಇಂದು ಬೆಳಿಗ್ಗೆ ನಂತರಲ್ಲಿ ರಜೆ ಘೋಷಣೆ ಮಾಡಿದೆ. ಹೀಗಾಗಿ ಜಿಲ್ಲಾಡಳಿತ ರಜೆ ಘೋಷಣೆ ಮಾಡುವ ಮೊದಲೆ ಗ್ರಾಮೀಣ ಪ್ರದೇಶದ ಅನೇಕ ವಿದ್ಯಾರ್ಥಿಗಳು ಶಾಲೆಗೆ ತೆರಳಿದ್ದು, ರಜೆ ಘೋಷಣೆ ಆದ ಬಳಿಕ ವಾಪಸ್ ಮನೆಗೆ ಬರುವಷ್ಟರಲ್ಲಿ ಹಲವ ಕಡೆಯಲ್ಲಿ ಜಲಾವೃತವಾಗಿ ವಿದ್ಯಾರ್ಥಿಗಳು ಪರದಾಡಿರುವ ಬಗ್ಗೆ ಸಹ ವರದಿಯಾಗಿದೆ.

RELATED ARTICLES  ಅಪಘಾತ : ಟೈಯರ್ ಪಂಚರ್ ತೆಗೆಯುತ್ತಿದ್ದ ಚಾಲಕನ ದೇಹ ಛಿದ್ರ..ಛಿದ್ರ..!