ಗೋಕರ್ಣ: ಸಾಧು ಸಂತರ ಮೇಲೆ ದಾಳಿ ನಡೆಯುತ್ತಿರುವುದು ಖಂಡನೀಯ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದ್ದಾರೆ.
ನಂದಿಪರ್ವತ ಆಶ್ರಮದ ಜೈನಮುನಿಗಳಾದ ಆಚಾರ್ಯ ಶ್ರೀ 100 ಕಾಮಕುಮಾರ ನಂದಿ ಮಹಾರಾಜರ ಹತ್ಯೆಯಾಗಿರುವುದು ಆಘಾತ ತಂದಿದೆ. ಯಾವುದೇ ಧರ್ಮದ ಸಾಧು- ಸಂತರನ್ನು ಗೌರವದಿಂದ ಕಾಣುವುದು ನಮ್ಮ ಸಂಸ್ಕøತಿ. ಅಂಥ ಸ್ಥಿತಿಯಲ್ಲಿ ಅಹಿಂಸೆಯನ್ನೇ ಬೋಧಿಸುತ್ತಾ ಬಂದ ಸಂತರ ಮೇಲೆ ದಾಳಿ ನಡೆಯುವುದು, ಹತ್ಯೆಯಂಥ ಕ್ರೂರ ಮಾರ್ಗ ಹಿಡಿಯುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಅವರು ಪ್ರಕಟಣೆಯಲ್ಲಿ ಹೇಳಿದ್ದಾರೆ.
ಜೈನಮುನಿ ಕಾಮಕುಮಾರ ನಂದಿ ಸ್ವಾಮೀಜಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಧರ್ಮವನ್ನು ಕಾಪಾಡುವುದು ಮತ್ತು ಧಾರ್ಮಿಕ ಸಂಸ್ಥೆಗಳಿಗೆ, ಮುಖಂಡರಿಗೆ ಸೂಕ್ತ ರಕ್ಷಣೆ ನೀಡುವುದು ಸರ್ಕಾರದ ಹೊಣೆ ಎಂದು ಅಭಿಪ್ರಾಯಪಟ್ಟಿದ್ದಾರೆ.

RELATED ARTICLES  ಉತ್ತರ ಕನ್ನಡದಲ್ಲಿ ಇಂದು 27 ಮಂದಿಗೆ ಕೊರೋನಾ ಪಾಸಿಟಿವ್.