ಭಟ್ಕಳ: ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್‌ಗೆ ಎದುರಿನಿಂದ ಅಪರಿಚಿತ ಕಾರು ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡು ಸಾವಿಗೀಡಾಗಿದ್ದಾರೆ. ಕಾರು ಚಾಲಕ ನಿಲ್ಲಿಸದೆ ಪರಾರಿಯಾಗಿದ್ದಾನೆ. ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬಸ್ತಿ ಗ್ರಾಮದ ಬಳಿ ಸೋಮವಾರ ರಾತ್ರಿ ಈ ಘಟನೆ ನಡೆದಿದೆ.ಹೊನ್ನಾವರ ತಾಲ್ಲೂಕಿನ ಮಂಕಿ ಮೂಲದ ಶಿವು ನಾಗೇಶ ನಾಯ್ಕ(28) ಮೃತ ದುರ್ದೈವಿಯಾಗಿದ್ದು, ಎಂಜಿನಿಯರ್ ಆಗಿದ್ದ ಈತ ಮಂಕಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ವೇಳೆ ಅಪಘಾತ ನಡೆದಿದೆ.

RELATED ARTICLES  ಈ ದೇವಾಲಯದಲ್ಲಿ ಶಿವಲಿಂಗಕ್ಕೆ ಬೆಣ್ಣೆ ಹಚ್ಚಿದರೆ ತುಪ್ಪವಾಗುತ್ತೆ!

ಕಾಮಗಾರಿಗಾಗಿ ಬಂದ್ ಆಗಿರುವ ಹೆದ್ದಾರಿಯ ಇನ್ನೊಂದು ಬದಿಯಲ್ಲಿ ತೆರಳುತ್ತಿದ್ದ ಬೈಕ್ ಸವಾರ ಶಿವುಗೆ ಹೆದ್ದಾರಿ ಡೈವರ್ಷನ್ ತಿಳಿಯದೇ ಎದುರಿನಿಂದ ವೇಗವಾಗಿ ಬಂದ ಕಾರು ಡಿಕ್ಕಿಯಾಗಿದ್ದು,ಕಾರಿನ ಚಾಲಕ ಕಾರನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದು, ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಗೋ ಮಾಂಸ ರಪ್ತಿನಲ್ಲಿ ನಂ2 ಆಗಲಿದೆಯೇ ಭಾರತ! ಹೊರಬಿದ್ದ ಸ್ಪೋಟಕ ವರದಿಯಲ್ಲಿ ಇರೋದೇನು ಗೊತ್ತಾ?