ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಮುಂದಿನ ಒಂದು ವಾರ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಬುಧವಾರವೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದ್ದು, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡಕ್ಕೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಗುರುವಾರ ಹಾಗೂ ಶುಕ್ರವಾರ ಕರಾವಳಿಯ ಮೂರು ಜಿಲ್ಲೆಗಳ ಜತೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗೂ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಮುಂದಿನ ಒಂದು ವಾರ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆ ಮುಂದುವರಿಯಲಿದೆ. ಜು.16ರ ಬಳಿಕ ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಎಂದು ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದೆರಡು ಬಾರಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.