ಬೆಂಗಳೂರು : ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಆರು ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ’ಯಲ್ಲೋ ಅಲರ್ಟ್’ ಫೋಷಿಸಲಾಗಿದೆ. ಕರಾವಳಿಯ ಬಹುತೇಕ ಕಡೆ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಕೆಲವೆಡೆಯೂ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿಯಲ್ಲಿ ಗಂಟೆಗೆ 40-45 ಕಿ.ಮೀ.ನಿ೦ದ 55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ವು ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ.

RELATED ARTICLES  ಒಮ್ಮೆ ಮಾತ್ರ ತಿದ್ದುಪಡಿ ಮಾಡಬಹುದು ಆಧಾರ್..! ಮತ್ತೆ ಬದಲಾಯ್ತು ನಿಯಮ.