ಅಂಕೋಲಾ: ತಾಲೂಕಿನ ಶಾಂತಿ ಸಾಗರ ಹೋಟೆಲ್ ಪಕ್ಕದ ಚತುಷ್ಪಥ ಹೆದ್ದಾರಿಯಲ್ಲಿ ಔಷಧಿ ತುಂಬಿದ ಟಾಟಾ ಏಸ್ ವಾಹನಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ವಾಹನದೊಳಗಿದ್ದ ಔಷಧಿ ಸುಟ್ಟು ಕರಕಲಾದ ಘಟನೆ ನಡೆದಿದೆ.

ಕಾರವಾರದಿಂದ ಹೊನ್ನಾವರ ಪಶು ಆಸ್ಪತ್ರೆಗೆ ಟಾಟಾ ಏಸ್ ವಾಹನದಲ್ಲಿ ಔಷಧಿ ಸಾಗಿಸಲಾಗುತ್ತಿತ್ತು. ಊಟದ ಸಮಯವಾದುದರಿಂದ ಚಾಲಕ ವಾಹನವನ್ನು ನಿಲ್ಲಿಸಿ ಊಟಕ್ಕೆ ಹೋಗಿದ್ದ. ಇದೇ ಅವಧಿಯಲ್ಲಿ ಯಾವುದೋ ರಾಸಾಯನಿಕ ಕ್ರಿಯೆಯಿಂದ ಆಕಸ್ಮಿಕವಾಗಿ ವಾಹನದಲ್ಲಿ ಹೊಗೆಯೊಂದಿಗೆ ಚಿಕ್ಕ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ನಂದಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ಅಗ್ನಿಶಾಮಕ ಠಾಣೆಗೆ ತಿಳಿಸಿದ್ದಾನೆ.

RELATED ARTICLES  ಜಿಲ್ಲಾ ಮಟ್ಟದ ಹಾಲಕ್ಕಿ ಸಮಾಜದ 4 ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಸಂಪನ್ನ.

ತಕ್ಷಣ ಠಾಣಾಧಿಕಾರಿ ಮತ್ತು ಸಿಬ್ಬಂದಿ ಆಗಮಿಸಿ ಬೆಂಕಿ ಆರಿಸಲು ಪ್ರಯತ್ನಿಸಿದರು. ವಾಹನಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಔಷಧಿಗೆ ಬೆಂಕಿ ಹೊತ್ತಿಕೊಂಡು ಪರಿಣಾಮ ಏಕಾಏಕಿ ದೊಡ್ಡದಾಗಿ ಬೆಂಕಿ ಉರಿದಿದೆ. ಅಗ್ನಿಶಾಮಕ ಸಿಬ್ಬಂದಿ ಸೂಕ್ತ ಸಮಯಕ್ಕೆ ಆಗಮಿಸಿದ ಕಾರಣ ಹೆಚ್ಚಿನ ಹಾನಿ ಸಂಭವಿಸಿಲ್ಲ.

RELATED ARTICLES  ಚಿತ್ರಿಗಿ ಪ್ರೌಢಶಾಲೆ: 3 ರಂದು ವಾರ್ಷಿಕ ಸ್ನೇಹ ಸಮ್ಮೇಳನ