ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೂ 15 ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಮೋದಿ ಭರವಸೆ ಬಗ್ಗೆ ಪುರಾವೆ ನೀಡುವಂತೆ ಆಡಳಿತಾರೂಢ ಬಿಜೆಪಿ ಒತ್ತಾಯಿಸಿದೆ. ಇಂದು ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಶಾಸಕ ಕೋನರೆಡ್ಡಿ ಅವರು, ಅವರು(ಬಿಜೆಪಿ) ನಮ್ಮ (ಕಾಂಗ್ರೆಸ್) ಖಾತರಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. ನಮ್ಮ ಸರ್ಕಾರ ಅದನ್ನು ಈಡೇರಿಸಲು ಕ್ರಮಗಳನ್ನು ತೆಗೆದುಕೊಳ್ಳುತ್ತಿರುವುದರಿಂದ ನಮ್ಮ ಭರವಸೆಗಳಿಗೆ ನಾವು ಬದ್ಧರಾಗಿದ್ದೇವೆ. ಆದರೆ ನೀವು ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂ.ಗಳನ್ನು ಜಮಾ ಮಾಡುವ ಭರವಸೆ ನೀಡಿದ್ದೀರಿ. ಆದರೆ ಒಂದೇ ಒಂದು ಬ್ಯಾಂಕ್ ಖಾತೆಗೂ ಹಣ ಜಮೆ ಮಾಡಿಲ್ಲ ಎಂದರು.

RELATED ARTICLES  ಮಿರ್ಜಾನ್ ಉರ್ದು ಶಾಲಾ ಜಾಗದಲ್ಲಿದ್ದ ಅನಧಿಕೃತ ಅಂಗಡಿ ತೆರವು.

ನೀವು ಯುವಕರಿಗೆ 2 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದೀರಿ, ಆದರೆ ಅದನ್ನು ಈಡೇರಿಸಲು ನಿಮ್ಮಿಂದ ಸಾಧ್ಯವಾಗಲಿಲ್ಲ. ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆ ನೀಡಿದ್ದೀರಿ ಎಂದು ಕೋನರೆಡ್ಡಿ ಹೇಳಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಿ ಬ್ಯಾಂಕ್ ಖಾತೆಗೆ 15 ಲಕ್ಷ ರೂ. ಜಮಾ ಮಾಡುವುದಾಗಿ ಪ್ರಧಾನಿ ಭರವಸೆ ನೀಡಿದ್ದಾರೆ ಎಂಬುದಕ್ಕೆ ಕನಿಷ್ಠ ಒಂದು ಸಾಕ್ಷ್ಯ ಅಥವಾ ವಿಡಿಯೋ ತುಣುಕನ್ನಾದರು ನೀಡುವಂತೆ ಕೋನರೆಡ್ಡಿ ಅವರಿಗೆ ಒತ್ತಾಯಿಸಿದರು.

ಅವರು(ಕೋನರೆಡ್ಡಿ) ಏಕೆ ಬೋಗಸ್ ಮತ್ತು ಸುಳ್ಳು ವಿಷಯಗಳನ್ನು ಮಾತನಾಡುತ್ತಿದ್ದಾರೆ? ಕೆಲವು ಶ್ರೀಮಂತರು ಮತ್ತು ರಾಜಕಾರಣಿಗಳು ಈ ದೇಶವನ್ನು ಲೂಟಿ ಮಾಡುವ ಮೂಲಕ ವಿದೇಶಿ ಬ್ಯಾಂಕ್ ಖಾತೆಗಳಲ್ಲಿ ಠೇವಣಿ ಇಟ್ಟಿರುವ ಕಪ್ಪುಹಣದ ಬಗ್ಗೆ ಮತ್ತು ಅವುಗಳನ್ನು ಮರಳಿ ಪಡೆಯುವ ಬಗ್ಗೆ ಆಗ ಪ್ರಧಾನಿ ಮಾತನಾಡಿದ್ದರು. ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮಾ ಮಾಡುವುದಾಗಿ ಪ್ರಧಾನಿ ಮೋದಿ ಭರವಸೆ ನೀಡಿದ ಭಾಷಣದ ಕನಿಷ್ಠ ಒಂದು ವಿಡಿಯೋ ಕ್ಲಿಪ್ಪಿಂಗ್ ಅನ್ನು ತೋರಿಸಲಿ. ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಯತ್ನಾಳ್ ಸವಾಲು ಹಾಕಿದರು.

RELATED ARTICLES  ಗ್ರಾಮ ಒಕ್ಕಲು ಯುವ ಬಳಗದಿಂದ ಆರ್ಥಿಕ ಸಹಾಯ.

ಇಂತಹ ಬೇಜವಾಬ್ದಾರಿ ಹೇಳಿಕೆಗಳನ್ನು ಯಾರೂ ನೀಡಬಾರದು, ಪ್ರತಿಯೊಬ್ಬರ ಬ್ಯಾಂಕ್ ಖಾತೆಗೆ 15 ಲಕ್ಷ ರೂಪಾಯಿ ಜಮೆ ಮಾಡುವ ಬಗ್ಗೆ ಪ್ರಧಾನಿ ಎಂದಿಗೂ ಮಾತನಾಡಿಲ್ಲ. ಆದರೆ ಬಿಜೆಪಿ ಸರ್ಕಾರ ಮತ್ತು ಪ್ರಧಾನಿ ವಿರುದ್ಧ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಸುಳ್ಳುಗಳನ್ನು ಹರಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.