ಯಲ್ಲಾಪುರ: ಯಲ್ಲಾಪುರ ತಾಲೂಕಿನ ಹೊಸಳ್ಳಿ ಗ್ರಾಮದ ದೊಡ್ಲಾ ಡೇರಿ ಎದುರು ಟ್ಯಾಂಕರ್ ಲಾರಿ ಡಿಕ್ಕಿಯಾಗಿ ಪಾದಚಾರಿಯು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

ಟ್ಯಾಂಕರ್ ಲಾರಿ ಚಾಲಕ ಆರೋಪಿ ಸುರೇಶ ಗೋಪಾಲನ್,ಟ್ಯಾಂಕರ್ ಲಾರಿಯನ್ನು ಹುಬ್ಬಳ್ಳಿ ಕಡೆಯಿಂದ ಯಲ್ಲಾಪುರ ಕಡೆಗೆ ಅತೀ ವೇಗವಾಗಿ ಚಲಾಯಿಸಿಕೊಂಡು ಬಂದು, ಎದುರಿಗೆ ಡಾಂಬರ್ ರಸ್ತೆಯ ಪಕ್ಕದ ಕಚ್ಚಾ ರಸ್ತೆಯಲ್ಲಿ ಹೊಸಳ್ಳಿ ಕಡೆಯಿಂದ ನಿಧಾನವಾಗಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ ನಿಂಗಪ್ಪ ಉಳ್ಳಾಗಡ್ಡಿ ಎಂಬುವವನಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿಯ ತಲೆಗೆ ತೀವ್ರ ಗಾಯವಾಗಿದ್ದು, ಗಾಯಾಳುವನ್ನು ಹುಬ್ಬಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತಾಗಿ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

RELATED ARTICLES  ಬರ್ಗಿ ಪ್ರೌಢಶಾಲೆಯ ಶಾರದಾ ಪೂಜೆಯಲ್ಲಿ ಗುರುವಂದನೆ