ಕುಮಟಾ : ರಾಷ್ಟ್ರಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್‍ಶಿಪ್‍ನಲ್ಲಿ ತಾಲೂಕಿನ ವೇಟ್ ಲಿಫ್ಟರ್ ವೆಂಕಟೇಶ್ ಪ್ರಭು 725 ಕೆಜಿ ಭಾರವನ್ನು ಎತ್ತುವ ಮೂಲಕ ಪ್ರಥಮ ಸ್ಥಾನಪಡೆದು, ಚಿನ್ನದ ಪದಕವನ್ನು ತನ್ನದಾಗಿಸಿಕೊಂಡು ಸಾಧನೆ ಮಾಡಿದ್ದಾರೆ. ಇವರು ಈ ಸಾಧನೆಯ ಮೂಲಕ ಮಂಗೋಲಿಯದಲ್ಲಿ ನಡೆಯಲಿರುವ ಜಾಗತಿಕ ಮಟ್ಟದ ಚಾಂಪಿಯನ್‍ಶಿಪ್‍ಗೆ ಆಯ್ಕೆಯಾಗಿದ್ದಾರೆ.
ಇನ್ನು 105 ಕೆಜಿ ವಿಭಾಗದಲ್ಲಿ ಮಾಸ್ಟರ್ ಒನ್ ವಿಭಾಗದಲ್ಲಿ ರಾಜೇಶ್ ಮಡಿವಾಳ 557 ಕೆಜಿ ಭಾರವನ್ನು ಎತ್ತುವ ಮೂಲಕ ಬೆಳ್ಳಿ ಪದಕ ಪಡೆದಿದ್ದಾರೆ.
ಆಂದ್ರ ಪ್ರದೇಶದ ವಿಜಯನಗರ ಜಿಲ್ಲೆಯ ರಾಜನ್ ತಾಲೂಕಿನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಇಬ್ಬರು ಸಾಧಕರು ಕ್ರಮವಾಗಿ ಚಿನ್ನ ಹಾಗೂ ಬೆಳ್ಳಿಯನ್ನು ಪಡೆಯುವುದರ ಮೂಲಕ ತಾಲೂಕಿಗೆ, ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಅವರ ಸಾಧನೆ ಹೀಗೆಯೇ ಮುಂದುವರೆಯಲಿ ಎಂದು ಕ್ರೀಡಾ ಪ್ರೇಮಿಗಳು ಹಾರೈಸಿದ್ದಾರೆ.