ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಖಾಲಿ ಇರುವ 84 ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ ಅಕ್ಟೋಬರ್ 14, 2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾ ನೇಮಕಾತಿ
ಹುದ್ದೆಯ ವಿವರ
ಹುದ್ದೆ: ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ)
ವಿದ್ಯಾರ್ಹತೆ
ಜೂನಿಯರ್ ಅಸಿಸ್ಟೆಂಟ್ (ಅಗ್ನಿಶಾಮಕ ಸೇವೆ) ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೆಕ್ಯಾನಿಕಲ್/ ಆಟೋಮೊಬೈಲ್ಸ್ ನಲ್ಲಿ ಮೂರು ವರ್ಷದ ಡಿಪ್ಲಮೋನಲ್ಲಿ ಕನಿಷ್ಟ ಶೇ. 50 ಅಂಕದೊಂದಿಗೆ ಪೂರ್ಣಗೊಳಿಸರಬೇಕು.
ವೇತನ ಶ್ರೇಣಿ: 12500 ರಿಂದ 28500 ರು. ತಿಂಗಳಿಗೆ.
ವಯೋಮಿತಿ
ಸಾಮಾನ್ಯ ಅಭ್ಯರ್ಥಿಗಳುಗೆ 18ರಿಂದ 30 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ ಹಾಗೂ ಹಿಂದೂಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ನೇಮಕಾತಿ ಪ್ರಕ್ರಿಯೆ
ಅಭ್ಯರ್ಥಿಗಳನ್ನು ಐದು ಹಂತಗಳಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಆನ್-ಲೈನ್ ಪರೀಕ್ಷೆ, ದಾಖಲೆ ಪರಿಶೀಲನೆ, ದೈಹಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ (ವಾಹನ ಚಾಲನೆ) ಮತ್ತು ಸಾಮರ್ಥ್ಯ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳನ್ನು ಅರ್ಜಿಗಳನ್ನು ಆನ್-ಲೈನ್ ಮೂಲಕ ಸಲ್ಲಿಸುವುದು.
ಅರ್ಜಿ ಶುಲ್ಕ
ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.1000/-
ಎಸ್.ಸಿ/ಎಸ್.ಟಿ/ಮಾಜಿ ಸೈನಿಕ/ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿರುವುದಿಲ್ಲ.
ಪ್ರಮುಖ ದಿನಾಂಕಗಳು
ಆನ್-ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭಿಕ ದಿನಾಂಕ: 24-09-2017
ಆನ್-ಲೈನ್ ಅರ್ಜಿ ಸಲ್ಲಿಕೆ* *ಕೊನೆಯ ದಿನಾಂಕ: 14-10-2017
ಶುಲ್ಕ ಪಾವತಿಸಲು ಕೊನೆಯ ದಿನಾಂಕ: 16-10-2017
NOTIFICATION
https://www.aai.aero/sites/default/files/examdashboard_advertisement/advt%28PDF%29fs-NR-200917.pdf