ಯಲ್ಲಾಪುರ : ಯಲ್ಲಾಪುರ ತಾಲೂಕಿನ ಹಳಿಯಾಳ ಕ್ರಾಸ್ ಸಮೀಪ ಕಾರಿನ ಮೇಲೆ ಬೃಹತ್ ಮರವೊಂದು ಮುರಿದು ಬಿದ್ದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯಗೊಂಡ ಘಟನೆ ನಡೆದಿದೆ. ಈ ಘಟನೆಯಲ್ಲಿ ಉಮ್ಮಚಗಿಯ ಸುಬ್ರಹ್ಮಣ್ಯ ಆರ್ ಹೆಗಡೆ, ಪರಶುರಾಮ ವಾಲಿಕಾರ್ ಗಾಯಗೊಂಡಿದ್ದಾರೆ.
ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆಯಲ್ಲಿ ಕಾರು ಸಂಪೂರ್ಣ ಜಕಂಗೊಂಡಿದೆ. ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.