ಯಲ್ಲಾಪುರ: ಖಾಸಗಿ ಬಸ್ ಮರಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಮೃತಪಟ್ಟು, 25 ಪ್ರಯಾಣಿಕರು ಗಾಯಗೊಂಡ ಘಟನೆ ಪಟ್ಡಣದ ಹಳಿಯಾಳ ಕ್ರಾಸ್ ಬಳಿ ನಡೆದಿದೆ. ಬೆಂಗಳೂರಿನಿಂದ ಗೋವಾಕ್ಕೆ ಹೋಗುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಬಸ್ ಬಲ್ಲಿ ಇಬ್ಬರು ಚಾಲಕರೂ ಸೇರಿ 33 ಜನ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

RELATED ARTICLES  ಹೇಗಿತ್ತು ಹೇಗಾಯ್ತು ಕುಮಟಾ ಮಣಕಿ ಮೈದಾನ! ಅಯ್ಯೋ ಗೋಳು ಕೇಳೋರೆ ಇಲ್ವೇ?