ಯಲ್ಲಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಡೋಮಗೆರೆ ಕ್ರಾಸ್ ಹತ್ತಿರ ಲಾರಿ ಮತ್ತು ಕಾರು ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಈ ಅಪಘಾತದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿ ಚಂದ್ರಶೇಖರ ದೇಶಮುಖ ಸವದತ್ತಿಯ ಹಿರೆಕುಂಬಿ ಎಂಬಾತ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ, ಇನ್ನುಳಿದ ಮೂರ್ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.