ಹೊನ್ನಾವರ : ಹೊನ್ನಾವರ ತಾಲ್ಲೂಕಿನಲ್ಲಿ ಧಾರಾಕಾರ ಮಳೆ ಹಿನ್ನಲೆ ಯಲ್ಲಿ ತಾಲ್ಲೂಕಿನ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಆದೇಶಿಸಿದ್ದಾರೆ. ಹೊನ್ನಾವರ ವ್ಯಾಪ್ತಿಯ ಗುಂಡಬಾಳ ನದಿ, ಭಾಸ್ಕರಿ ಹೊಳೆ ಉಕ್ಕಿ ಹರಿಯುತ್ತಿರುವ ಪರಿಣಾಮ ಹಲವು ಗ್ರಾಮಗಳಿಗೆ ಎದುರಾಗಿರುವ ಪ್ರವಾಹ ಆತಂಕ ಸೃಷ್ಟಿಯಾಗಿದೆ.ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿರುವ ಹಿನ್ನಲೆಯಲ್ಲಿ ರಾತ್ರಿ ಮತ್ತೆ ನದಿ, ಹೊಳೆ ಹರಿವು ಹೆಚ್ಚುವ ಸಾಧ್ಯತೆ ಇದ್ದು ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

RELATED ARTICLES  ಎಸ್‌ಬಿಐ ನೇಮಕಾತಿ : 76 ವಿಶೇಷ ಕೇಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.