ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಅಂಕೋಲಾ ತಾಲೂಕಿನಲ್ಲಿ ಮಳೆ ಜೋರಾಗಿ ಬೀಳುತ್ತಿರುವದರಿಂದ ಸಹಾಯಕ ಆಯುಕ್ತರ ನಿರ್ದೇಶನ ಹಾಗೂ ಮುಖ್ಯಶಿಕ್ಷಕರ ವಿನಂತಿ ಮೇರೆಗೆ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ದಿನಾಂಕ -25-07-2023 ರಂದು ಸಹ ತಾಲೂಕಿನ ಎಲ್ಲ ಅಂಗನವಾಡಿ ಹಾಗೂ 1-12 ನೆ ತರಗತಿಗಳಿಗೆ ರಜೆ ಮುಂದುವರಿಸಿದ್ದಾರೆ. ಮಳೆಯ ಪ್ರಮಾಣ ಇನ್ನೂ ಜಾಸ್ತಿ ಆಗುವ ನಿರೀಕ್ಷೆಯಿದ್ದು, ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಲವೆಡೆ ನೀರು ತುಂಬಿ ಅವಾಂತರ ಸೃಷ್ಟಿಯಾಗುತ್ತದೆ. ಈ ಹಿನ್ನೆಲೆಯಲ್ಲಿ ರಜೆ ಘೋಷಣೆ ಮಾಡಲಾಗಿದೆ.
ಇನ್ನು ಹೊನ್ನಾವರ ತಾಲೂಕಿನಲ್ಲಿ ಮಳೆ ಜೋರಾಗಿ ಬೀಳುತ್ತಿರುವದರಿಂದ ಸಹಾಯಕ ಆಯುಕ್ತರ ನಿರ್ದೇಶನ ಹಾಗೂ ಮುಖ್ಯಶಿಕ್ಷಕರ ವಿನಂತಿ ಮೇರೆಗೆ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ದಿನಾಂಕ -25-07-2023 ರಂದು ಸಹ ತಾಲೂಕಿನ ಎಲ್ಲ ಅಂಗನವಾಡಿ ಹಾಗೂ 1-12 ನೆ ತರಗತಿಗಳಿಗೆ ರಜೆ ಮುಂದುವರಿಸಲಾಗಿದೆ –