ಕಾರವಾರ : ಮಳೆ ಮುಂದುವರಿದಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ (ಜು.25) ಕೂಡ ಉತ್ತರಕನ್ನಡದ ಶಾಲಾ- ಕಾಲೇಜುಗಳಿಗೆ (ಪಿಯುವರೆಗೆ) ರಜೆ ಘೋಷಿಸಿ Deputy Commissioner Uttara Kannada ಆದೇಶಿಸಿದ್ದಾರೆ.
ಜಿಲ್ಲೆಯಲ್ಲಿ ಎಡಬಿಡದೆ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗುತ್ತಿದ್ದು ಹಲವು ಮನೆಗಳು ಜಲಾವೃತವಾಗಿದೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದ್ದು ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಹಿನ್ನೆಲೆಯಲ್ಲಿ ಮುನ್ನೆಚ್ಚರಿಗಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ ಈ ಮೂಲಕ ಮತ್ತೆ ಎರಡನೇ ದಿನವೂ ಶಾಲೆಗಳಿಗೆ ರಜೆ ಮುಂದುವರಿದಂತಾಗಿದೆ. ಇನ್ನು ಜಿಲ್ಲೆಯಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು ಗಾಳಿ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.