ಯಲ್ಲಾಪುರ : ಹಿರಿಯ ಪತ್ರಕರ್ತ, ಅಂಕಣಕಾರ ಅನಂತ ವೈದ್ಯ (75) ಅವರು ಅನಾರೋಗ್ಯದಿಂದ ಸೋಮವಾರ ನಿಧನರಾಗಿದ್ದಾರೆ.
ಮೂಲತಃ ಅಂಕೋಲಾ ತಾಲೂಕಿನ ವೈದ್ಯಹೆಗ್ಗಾರಿನವರಾಗಿದ್ದು ಅವರು ಪತ್ನಿ ವಿಜಯಶ್ರೀ, ಇಬ್ಬರು ಪುತ್ರಿಯರಾದ ಕವಿತಾ, ಸಂಗೀತಾ, ಓರ್ವ ಪುತ್ರ ಕಿರಣ ಸೇರಿದಂತೆ ಅಪಾರ ಬಂಧು ಬಳಗ ವನ್ನು ಅಗಲಿದ್ದಾರೆ. ರಾಜ್ಯ ಮಟ್ಟದ ದಿನಪತ್ರಿಕೆಯ ವರದಿಗಾರರಾಗಿ ಕೆಲವು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು.
ಕನ್ನಡ ಮತ್ತು ಸಂಸ್ಕೃತದಲ್ಲಿ ಅಪಾರ ಪಾಂಡಿತ್ಯವಿದ್ದ ಅವರು ಯಕ್ಷಗಾನದ ಮೊಟ್ಟಮೊದಲ ಮಾಸಪತ್ರಿಕೆ ಯಕ್ಷರಂಗದ ಸಂಪಾದಕರಾಗಿ ಹಲವು ವರ್ಷ ತಮ್ಮ ಪ್ರಕಾಶ ಪ್ರಿಂಟಿಂಗ್ ಪ್ರೆಸ್ಸಿನ ಮೂಲಕ ಪ್ರಕಟಿಸಿದ್ದರು. ಯಕ್ಷಗಾನದ ಅರ್ಥಧಾರಿಗಳಾಗಿ ಹೆಸರು ಮಾಡಿದ್ದ ಅವರು ಯಕ್ಷಗಾನದ ಶ್ರೇಷ್ಠ ಕಲಾವಿದರು ಹಾಗೂ ಅರ್ಥಧಾರಿಗಳಾಗಿದ್ದ ಶೇಣಿ ಗೋಪಾಲಕೃಷ್ಣ ಭಟ್ಟ ರವರ ಚಿಂತನೆಗಳನ್ನು ಸಂಗ್ರಹಿಸಿ ಜ್ಞಾನಯಜ್ಞ ಎಂಬ ಪುಸ್ತಕವನ್ನು ಸಂಪಾದಿಸಿ ಪ್ರಕಟಿಸಿದ್ದರು. ಇವರು ಬರೆದ ” ಪಾದುಕಾ ಪ್ರದಾನ” ಗ್ರಂಥ ಕೆಲವು ವರ್ಷಗಳ ಕೆಳಗೆ ಪ್ರಕಟಗೊಂಡಿದೆ. ಪುರಾಣ ಮತ್ತು ಭಾರತಗಳಲ್ಲಿನ ವಿಶಿಷ್ಟ ಸಂಗತಿಗಳನ್ನಾಧರಿಸಿದ ಅಂಕಣವನ್ನು ರಾಜ್ಯ ಮಟ್ಟದ ಪತ್ರಿಕೆಯಲ್ಲಿ ಬರೆದಿದ್ದಾರೆ.

RELATED ARTICLES  ಎಸ್.ಡಿ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಜ್ಯ ಮಟ್ಟಕ್ಕೆ ಆಯ್ಕೆ