ಹಳಿಯಾಳ: ಹಳಿಯಾಳ ತಾಲೂಕಿನ ಮುರ್ಕವಾಡ ಮುಖ್ಯರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಸಮೀಪ ಟ್ರಕ್ಕೊಂದು ಪಲ್ಟಿಯಾದ ಘಟನೆ ನಡೆದಿದೆ. ಮುರ್ಕವಾಡದಿಂದ ಹಳಿಯಾಳಕ್ಕೆ ಬರುತ್ತಿದ್ದ ಎಂ.ಎಚ್ :12, ಎಚ್.ಡಿ : 1840 ಸಂಖ್ಯೆಯ ಟ್ರಕ್ಕೊಂದು ಚಾಲಕನ ನಿಯಂತ್ರಣ ತಪ್ಪಿ ಮುರ್ಕವಾಡದ ಪೆಟ್ರೋಲ್ ಬಂಕ್
ಹತ್ತಿರ ಮುಖ್ಯರಸ್ತೆಯ ಬದಿಯಲ್ಲಿ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಚಾಲಕನಿಗೆ ಗಾಯವಾಗಿದ್ದು, ಹಳಿಯಾಳ ತಾಲ್ಲೂಕು ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ಈ ಘಟನಾ ಸ್ಥಳಕ್ಕೆ ಹಳಿಯಾಳದ ಪೊಲೀಸರು ಭೇಟಿ ನೀಡಿ ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.