ಜಿಲ್ಲೆಯ ಕಾರವಾರ, ಜೋಯಿಡಾ, ಹಳಿಯಾಳ ಮತ್ತು ದಾಂಡೇಲಿ ತಾಲೂಕುಗಳಲ್ಲಿ ಮಳೆಯ ಆರ್ಭಟ ಮುಂದುವರೆದಿರುವುದರಿಂದ ಅಗತ್ಯ ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತವು ಜುಲೈ 26 ರಂದು ಈ ನಾಲ್ಕು ತಾಲೂಕಗಳ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನುಳಿದ ತಾಲೂಕುಗಳಲ್ಲಿ ಮಳೆ ಪ್ರಮಾಣವನ್ನು ಅವಲೋಕಿಸಿ ಅಲ್ಲಿನ ತಹಶೀಲ್ದಾರ್ ರವರಿಗೆ ಶಾಲೆ ಕಾಲೇಜು ರಜೆಗಳ ಬಗ್ಗೆ ಅಗತ್ಯ ಕ್ರಮ ವಹಿಸಲು ಅಧಿಕಾರ ನೀಡಲಾಗಿದೆ.

RELATED ARTICLES  ದಾಂಡೇಲಿಯಲ್ಲಿ ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಹೊನ್ನಾವರ ತಾಲೂಕಿನಲ್ಲಿ ಮಳೆ ಜೋರಾಗಿ ಬೀಳುತ್ತಿರುವದರಿಂದ ಹಾಗೂ ಕೆಲವು ಪ್ರದೇಶಗಳಲ್ಲಿ ನೀರು ತುಂಬಿರುವುದರಿಂದ ಸಹಾಯಕ ಆಯುಕ್ತರ ನಿರ್ದೇಶನದ ಮೇರೆಗೆ ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಚರ್ಚಿಸಿ ನಾಳೆ ದಿನಾಂಕ -26-07-2023 ರಂದು ಸಹ ತಾಲೂಕಿನ ಎಲ್ಲ ಅಂಗನವಾಡಿ ಹಾಗೂ 1-12 ನೆ ತರಗತಿಗಳಿಗೆ ರಜೆ ಮುಂದುವರಿಸಲಾಗಿದೆ – ತಹಶೀಲ್ದಾರ್ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹೊನ್ನಾವರ

RELATED ARTICLES  ರಾಷ್ಟ್ರೀಕೃತ ಬ್ಯಾಂಕುಗಳ ಪರೀಕ್ಷೆಯನ್ನೂ ಕನ್ನಡದಲ್ಲಿ ಬರೆಯಬಹುದು.