ಕುಮಟ : ಶಿರಸಿ-ಕುಮಟಾ ಹೆದ್ದಾರಿಯ ರಾಗಿ ಹೊಸಳ್ಳಿ ಬಳಿ ಮತ್ತೆ ಗುಡ್ಡಕುಸಿತವಾಗಿದ್ದು, ಹೆದ್ದಾರಿ ಸಂಪೂರ್ಣ ಕೆಸರುಮಯವಾಗಿದ್ದು, ಚಲಿಸುತ್ತಿದ್ದ ಕಾರೊಂದು ಮಣ್ಣಿನಲ್ಲಿ ಸಿಲುಕಿಕೊಂಡಿರುವ ಘಟನೆ ನಡೆದಿದೆ. ಕಳೆದ ಕೆಲ ದಿನಗಳಿಂದ ನಿರಂತರಾಗಿ ಸುತಿಯುತ್ತಿರುವ ಮಳೆಯಿಂದಾಗಿ ಶಿರಸಿ- ಕುಮಟಾ ಹೆದ್ದಾರಿಯಲ್ಲಿ ಕಳೆದ ಮೂರು ದಿನಗಳ ಹಿಂದೆ ಗುಡ್ಡ ಕುಸಿತವಾಗಿ ಸಂಚಾರ ಕೆಲ ಗಂಟೆಗಳವರೆಗೆ ಸಂಪೂರ್ಣ ಬಂದಾಗಿತ್ತು. ಬಳಿಕ ಮಣ್ಣು ತೆರವುಗೊಳಿಸಲಾಗಿತ್ತಾದರು ಇದೇ ಪ್ರದೇಶದಲ್ಲಿ ಮತ್ತೆ ಕುಸಿತವಾಗಿ ಮಣ್ಣು ಹೆದ್ದಾರಿಗೆ ಬಂದಿದೆ. ಸದ್ಯ ಜೆಸಿಬಿ ಮೂಲಕ ಮಣ್ಣು ತೆರವು ಮಾಡಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

RELATED ARTICLES  ಮೂಲ ಸೌಕರ್ಯದಿಂದ ವಂಚಿತವಾದ ಯಲ್ಲಾಪುರದ ಈ ಗ್ರಾಮದ ಜನ ತೆಗೆದುಕೊಂಡ ನಿರ್ಧಾರ ಏನು ಗೊತ್ತಾ?

ಆದರೂ ಬುಧವಾರ ಮುಂಜಾನೆ ಕೂಡ ಕಾರೊಂದು ಕೆಸರಿನಲ್ಲಿ ಸಿಲುಕಿಕೊಂಡಿತ್ತು. ಹೆದ್ದಾರಿ ಕಾಮಗಾರಿಯ ಕಾರ್ಮಿಕರು, ಪ್ರಯಾಣಿಕರು ವಾಹನವನ್ನು ತಳ್ಳಿ ಮೇಲೆತ್ತಲು ಪ್ರಯತ್ನಿಸಿದರು ಕೂಡ ಸಾಧ್ಯವಾಗದೇ, ಕೊನೆಗೆ ಜೆಸಿಬಿ ಮೂಲಕ ಸಿಲುಕಿರುವ ವಾಹನಕ್ಕೆ ಹಗ್ಗ ಕಟ್ಟಿ ಎಳೆದು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.

RELATED ARTICLES  ಹಳ್ಳೇರ ಸಮಾಜದ ವಿಠೋಬದೇವ ಯುವಕ ಸಂಘದಿಂದ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾವಳಿ