ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರ ಜಿಲ್ಲೆಯ ಹಜಿನ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್’ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಬುಧವಾರ ತಿಳಿದುಬಂದಿದೆ.
ಉತ್ತರ ಕಾಶ್ಮೀರದ ಹಜಿನ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಖಚಿತ ಮಾಹಿತಿ ಲಭ್ಯವಾದ ಹಿನ್ನಲೆಯಲ್ಲಿ ಭಾರತೀಯ ಸೇನೆಪಡೆಗಳು ಇಂದು ಬೆಳಿಗ್ಗೆ ಉಗ್ರರ ವಿರುದ್ಧ ಕಾರ್ಯಾಚರಣೆಗಳಿದಿತ್ತು.
ಈ ವೇಳೆ ಉಗ್ರರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಗಾಯಗೊಂಡಿದ್ದ ಯೋಧರು ಹುತಾತ್ಮರಾಗಿದ್ದಾರೆಂದು ತಿಳಿದುಬಂದಿದೆ.
ಉಗ್ರರು ಯೋಧರ ಮೇಲೆ ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ಸೇನಾಪಡೆಗಳು ಕಾರ್ಯಾಚರಣೆಗಳನ್ನು ಚುರುಕುಗೊಳಿಸಿದೆ. ಇದರಂತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಪ್ರಸ್ತುತ ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿದ್ದು, ಉಗ್ರರು ಹಾಗೂ ಸೇನಾಪಡೆಗಳ ನಡುವೆ ಗುಂಡಿನ ಚಕಮಕಿಗಳು ಮುಂದುವರೆಸಿದೆ ಎಂದು ಹೇಳಲಾಗುತ್ತಿದೆ.
RELATED ARTICLES  ದಕ್ಷ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ ನಿಧನಕ್ಕೆ ಗಣ್ಯರ ಕಂಬನಿ.