ಹೊನ್ನಾವರ : ಪಟ್ಟಣದ ಮೂರುಕಟ್ಟೆ ಸಮೀಪ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ, ಪಾದಚಾರಿ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಡೆದಿದೆ. ಹೊನ್ನಾವರ ಕಡೆಯಿಂದ ಬೆಂಗಳೂರಿಗೆ ಚಲಿಸುತ್ತಿದ್ದ ಖಾಸಗಿ ಬಸ್ ಅನ್ನು ಚಾಲಕ ಅತೀ ವೇಗವಾಗಿ ಚಲಾಯಿಸಿಕೊಂಡು ಬರುತ್ತಿದ್ದ ಎನ್ನಲಾಗಿದೆ.

RELATED ARTICLES  ಯುಟ್ಯೂಬ್‌ನಲ್ಲಿ ಪ್ರಸಾರವಾದ ಜಾಹೀರಾತು ನಂಬಿ 7 ಲಕ್ಷ ಕಳೆದುಕೊಂಡ.

ಪಾದಚಾರಿ ಹೆದ್ದಾರಿಯಲ್ಲಿ ಒಂದು ಕಡೆಯಿಂದ ಇನ್ನೊಂದು ಕಡೆ ದಾಟುತ್ತಿದ್ದಾಗ, ಅತಿವೇಗವಾಗಿ ಬಂದ ಖಾಸಗಿ ಬಸ್ ಪಾದಚಾರಿಗಳಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಅಪರಿಚಿತ ಪಾದಚಾರಿ ತಲೆಗೆ ಗಂಭೀರವಾಗಿ ಗಾಯಗೊಂಡು ಆತ ಸ್ಥಳದಲ್ಲೆ ಸಾವನಪ್ಪಿದ್ದಾನೆ. ಅಪಘಾತದ ಪರಿಣಾಮ ಪಾದಾಚಾರಿ ರಕ್ತದ ಮಡುವಿನಲ್ಲಿ‌ ಬಿದ್ದು ಒದ್ದಾಡಿ ತನ್ನ ಪ್ರಾಣ ಬಿಟ್ಟಿದ್ದಾನೆ.

RELATED ARTICLES  ನದಿಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಸಿಕ್ಕ ಅಪರಿಚಿತ ಮಹಿಳೆ ಸಾವು

ಅಪಘಾತಕ್ಕೆ ಕಾರಣವಾಗಿರುವ ಬಸ್ ಚಾಲಕ ಸ್ಥಳದಲ್ಲೆ ಬಸ್ ಬಿಟ್ಟು ಪರಾರಿಯಾಗಿದ್ದು, ಈ ಬಗ್ಗೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.