ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಾನ್ಯ ದಿನಕರ ಶೆಟ್ಟಿಯವರು ಇಂದು ಕುಮಟಾ ತಾಲೂಕಿನ ಮಿರ್ಜಾನ, ಕೋಡ್ಕಣಿ, ಬರ್ಗಿ ಹಾಗೂ ದೀವಗಿ ಗ್ರಾಮಪಂಚಾಯತ್ ವ್ಯಾಪ್ತಿಯ ವಸತಿ ಯೋಜನೆ ಫಲಾನುಭವಿಗಳಿಗೆ ಕಾಮಗಾರಿ ಆದೇಶ ಪತ್ರವನ್ನು ವಿತರಣೆ ಮಾಡಿದರು. ಮಿರ್ಜಾನಿನ ರಾಮಕ್ಷತ್ರಿಯ ಸಭಾಭವನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ನಾಲ್ಕು ಪಂಚಾಯತ ವ್ಯಾಪ್ತಿಯ 82 ಫಲಾನುಭವಿಗಳಿಗೆ ಆದೇಶ ಪತ್ರವನ್ನು ಶಾಸಕರು ಹಸ್ತಾಂತರ ಮಾಡಿದರು.

ನಂತರ ಮಾತನಾಡಿದ ದಿನಕರ ಶೆಟ್ಟಿಯವರು ಸೂಕ್ತ ವಸತಿವ್ಯವಸ್ಥೆ ಇಲ್ಲದ ಬಡ ಕುಟುಂಬಗಳಿಗೆ ಅನುಕೂಲವಾಗಬೇಕೆಂದು ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ಯೋಜನೆಯನ್ನು ನೀಡಲಾಗಿದೆ. ಹಿಂದಿನ ಅವಧಿಯಲ್ಲಿ ನಮ್ಮ ವಿಧಾನಸಭಾ ಕ್ಷೇತ್ರಕ್ಕೆ 2,000 ಹೆಚ್ಚುವರಿ ಮನೆಗಳನ್ನು ತಂದಿದ್ದು, ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಬಸವರಾಜ ಬೊಮ್ಮಾಯಿ ಹಾಗೂ ಅಂದಿನ ವಸತಿ ಸಚಿವ ಸನ್ಮಾನ್ಯ ವಿ. ಸೋಮಣ್ಣ ಅವರು ಸ್ಮರಣೀಯರು. ಫಲಾನುಭವಿಗಳೆಲ್ಲರು ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಹಿಂದಿನ ಸರ್ಕಾರದ ಅವಧಿಯಲ್ಲಿ ವಸತಿಯೋಜನೆಯಲ್ಲಿ ಅತಿಹೆಚ್ಚು ಮನೆಗಳು ಮಂಜೂರಾಗಿದ್ದು, ವಸತಿರಹಿತರಿಗೆ ಇದರಿಂದ ಅನುಕೂಲವಾಗಿದೆ. ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಂದ ಮಾಹಿತಿ ಪಡೆದು, ಸರ್ಕಾರದ ನಿಯಮನುಸಾರ ಮನೆಯನ್ನು ನಿರ್ಮಿಸಿ ಎಂದು ಫಲಾನುಭವಿಗಳಿಗೆ ಸೂಚಿಸಿದರು.

RELATED ARTICLES  "ಲಾಯನ್ಸ್ ರೇವಣಕರ ಚೆರಿಟೆಬಲ್ ಕಣ್ಣಿನ ಆಸ್ಪತ್ರೆ"ಯಲ್ಲಿ ಶಿಬಿರಾರ್ಥಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಗ್ರಾಮಪಂಚಾಯತ್ ಅಧ್ಯಕ್ಷರುಗಳಾದ ಪರಮೇಶ್ವರ್ ಪಟಗಾರ, ರಾಜೇಶ ಪಟಗಾರ, ವಿಶಾಲಾಕ್ಷಿ ಪಟಗಾರ, ನಾಗವೇಣಿ ಅಂಬಿಗ, ಉಪಾಧ್ಯಕ್ಷರುಗಳಾದ ಸೀತಾ ಭಟ್, ದೇವಿ ಮುಕ್ರಿ, ಭಾರತಿ ಹರಿಕಾಂತ, ತಾ. ಪಂ. ಸಹಾಯಕ ಲೆಕ್ಕಾಧಿಕಾರಿ ನಾರಾಯಣ ಪಟಗಾರ ಪಂಚಾಯತ್ ಸದಸ್ಯರುಗಳು ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES  Northstake To Provide Staking Solutions On Concordium Blockchain