ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ ಮದ್ರಾಸ್ ಐʼ ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಲಾಗಿದೆ. ಕಂಜಕ್ಟಿವ ಉತ್ಪತ್ತಿ (ಕಾಂಜಂಕ್ಟಿವಿಟಿಸ್) ಎಂದು ಕರೆಯಲಾಗುವ ಮದ್ರಾಸ್ ಐ ಅಥವಾ
ಕಣ್ಣು’ ವೈರಾಣುಗಳಿಂದ ಹರಡುವ ಕಣ್ಣಿನ ಸಮಸ್ಯೆ. ವಾತಾವರಣದಲ್ಲಿ ತೇವಾಂಶ ಹೆಚ್ಚಾದಾಗ ಅಥವಾ ಚಳಿ ವಾತಾವರಣದಲ್ಲಿ ಹುಟ್ಟಿಕೊಳ್ಳುವ ವೈರಾಣುಗಳು ನೇರವಾಗಿ ಕಣ್ಣಿನ ಮೇಲೆ ಪರಿಣಾಮ ಬೀರುತ್ತದೆ. ಈ ಬಾರಿ ರಾಜ್ಯದಲ್ಲಿ ಮಳೆಗಾಲಕ್ಕೂ ಮುನ್ನವೇ ಮದ್ರಾಸ್ ಐ
ಪ್ರಕರಣ ಕಾಲಿಟ್ಟಿತ್ತು. ಈ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಜನರು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ.
ಈ ರೋಗದ ಲಕ್ಷಣಗಳು:
1.ಕಣ್ಣು ಕೆಂಪಾಗುವುದು, ನೀರು ಸೋರುವಿಕೆ
2.ಅತಿಯಾದ ಕಣ್ಣೀರು
3.ಕಣ್ಣಿನಲ್ಲಿ ತುರಿಕೆ
4.ಸತತ ಕಣ್ಣು ನೋವು ಮತ್ತು ಚುಚ್ಚುವಿಕೆ
5.ಬೆಳಕನ್ನು ನೋಡಲು ಸಾಧ್ಯವಾಗುವುದು
6.ದೃಷ್ಟಿ ಮಂಜಾಗುವುದು
7.ಕಣ್ಣಿನ ಎರಡು ರೆಪ್ಪೆಗಳು ಕೀವು ಮಿಶ್ರಿತದಿಂದ ಕೂಡಿರುವುದು
ಮುಜಾಗ್ರತೆ ವಹಿಸುವುದು ಹೇಗೆ ?
1.ವೈಯಕ್ತಿಕವಾಗಿ ಮಾನ್ಯತೆಗೆ ಆದ್ಯತೆ ಕೊಡಿ
2.ಆರೋಗ್ಯವಂತ ಸೋಂಕು ಇರುವ ವ್ಯಕ್ತಿಯ ಕಣ್ಣಿನ ನೇರ ಸಂಪರ್ಕದಿಂದ ದೂರವಿರುವುದು
- ಸೋಂಕಿತ ವ್ಯಕ್ತಿ ಬಳಸಿದ ಕರವಸ್ತ್ರ ಮತ್ತು ಇತರ ವಸ್ತುಗಳನ್ನು ಬಳಸಬಾರದು
4.ಆಗಾಗ ಸೋಪು ನೀರಿನಿಂದ ಕೈಗಳನ್ನು ತೊಳೆಯಬೇಕು
5.ಸೋಂಕಿತ ವ್ಯಕ್ತಿಗಳಿಗೆ ಶೀತ, ಜ್ವರ, ಕೆಮ್ಮು ಇದ್ದಲ್ಲಿ ತಕ್ಷಣ ಚಿಕಿತ್ಸೆ ಪಡೆಯಬೇಕು - ತೀವ್ರ ಸೋಂಕು ಉಂಟಾದರೆ ತಕ್ಷಣವೇ ನೇತ್ರ ಅನಾರೋಗ್ಯಕ್ಕೆ ಭೇಟಿ ನೀಡಬೇಕು.
ಏನು ಮಾಡಬೇಕು ?
1.ಸ್ಪಚ್ಫವಾದ ನೀರಿನಿಂದ ಕಣ್ಣುಗಳನ್ನು ಶುಚಿಗೊಳಿಸಿ
2.ಸೋಂಕು ಕಂಡು ಬಂದ ತಕ್ಷಣ ವೈದ್ಯರಿಂದ ಚಿಕಿತ್ಸೆ ಪಡೆಯಿರಿ
3.ಸೋಂಕಿತ ವ್ಯಕ್ತಿಗಳಿಗೆ ಪೌಷ್ಟಿಕ ಆಹಾರ ಕೊಡಬೇಕು
- ಸೋಂಕಿತ ವ್ಯಕ್ತಿಗಳು ಬಳಸಿದ ಕರ, ಇತರ ವಸ್ತುಗಳನ್ನು ಸಂಸ್ಕರಿಸಿ ಬಳಸಿರಿ
ಏನು ಮಾಡಬಾರದು ?
1.ಕೈಗಳಿಂದ ಪದೇ ಪದೇ ಕಣ್ಣುಗಳನ್ನು ಮುಟ್ಟಬೇಡಿ
2.ಸ್ವಯಂ ಚಿಕಿತ್ಸಾ ವಿಧಾನಗಳನ್ನು ಮಾಡಬಾರದು
3.ಸೋಂಕಿತ ವ್ಯಕ್ತಿಯ ಸನಿಹದಿಂದ ದೂರವಿರಿ
4.ಸೋಂಕಿತ ವ್ಯಕ್ತಿಗಳು ಬಳಸಿದ ವಸ್ತುಗಳನ್ನು ಮುಟ್ಟಬೇಡಿ
Source : Samagra smachar