ಯಲ್ಲಾಪುರ: ಯಲ್ಲಾಪುರ ತಾಲೂಕಿನ ಮೂಲಕ ಹಾದುಹೋದ ರಾಷ್ಟ್ರೀಯ ಹೆದ್ದಾರಿ-63ರಲ್ಲಿ ತೆಂಗಿನಕೇರಿ ಕ್ರಾಸ್ ಹತ್ತಿರ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತನೊಂದಿಗೆ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಬೈಕ್ ಅನ್ನು ಅತೀ ವೇಗ ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯಲ್ಲಿ ಎಮ್ಮೆ ಅಡ್ಡ ಬಂದ ಪರಿಣಾಮ ಬೈಕಿನ ನಿಯಂತ್ರಣ ಕಳೆದುಕೊಂಡು ಎಮ್ಮೆಗೆ ಬೈಕ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ನಡೆದಿದೆ.
ಈ ಅಪಘಾತದಲ್ಲಿ ಬೈಕ್ ಸವಾರ ವಿದ್ಯಾರ್ಥಿಯ ತಲೆಗೆ ತೀವ್ರ ಗಾಯವಾಗಿ ಚಿಕಿತ್ಸೆಗೆಂದು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಹೋಗುವಾಗ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಮೃತಪಟ್ಟ ವಿದ್ಯಾರ್ಥಿಯನ್ನು ಹುಬ್ಬಳ್ಳಿಯ 19 ವರ್ಷದ ಜೀವನ್ ಎಂದು
ಗುರುತಿಸಲಾಗಿದೆ. ಅಪಘಾತದಲ್ಲಿ ಬೈಕ್ ಸಹಸವಾರ ಈತನ ಸ್ನೇಹಿತ ಸಾಯಿಬಾಬಾ ಗಾಯಗೊಂಡಿದ್ದಾನೆ. ಬೈಕ್ ಜಕಂಗೊಂಡಿದೆ. ಈ ಕುರಿತಾಗಿ ಯಲ್ಲಾಪುರ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.