ಹಳಿಯಾಳ : ಹಳಿಯಾಳ ಪಟ್ಟಣದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮದ್ಯ ಸಾಗಾಟ ಮಾಡುತ್ತಿದ್ದ ವ್ಯಕ್ತಿಯೋರ್ವ ವಾಹನ ತಪಾಸಣೆಯ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿರುವ ಘಟನೆ ನಡೆದಿದೆ. ಹಳಿಯಾಳ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ಅಮೀನಸಾಬ ಅತ್ತರ ಅವರು ಪೊಲೀಸ್ ಸಿಬ್ಬಂದಿಗಳೊಂದಿಗೆ ಹಳಿಯಾಳ ಪಟ್ಟಣದಲ್ಲಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಸಂದರ್ಭದಲ್ಲಿ ತಾಲ್ಲೂಕಿನ ಅಂತ್ರೋಳ್ಳಿಯ ನಿವಾಸಿ ಪರಶುರಾಮ ಎಂಬಾತನು ಕೆಎ:65, ಇ:2234 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಮಾರಾಟ ಮಾಡುವ ಉದ್ದೇಶದಿಂದ ಮದ್ಯ ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.
ಈ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿದ್ದ 90 ಎಂ.ಎಲ್ ಒರಿಜಿನಲ್ ಚಾಯ್ಸ್ ಡಿಲಕ್ಸ್ ವಿಸ್ಕಿ ಹೆಸರಿನ 52 ಪೌಚ್ ಪತ್ತೆಯಾಗಿದ್ದು, ಮದ್ಯ ಹಾಗೂ ದ್ವಿಚಕ್ರ ವಾಹನವನ್ನು
ವಶಪಡಿಸಿಕೊಂಡು ಅಪಾದಿತನ ಮೇಲೆ ಕಲಂ: 32, 34 ಕರ್ನಾಟಕ ಅಬಕಾರಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಲಾಗಿದೆ.