ಹೊನ್ನಾವರ: ತಾಲೂಕಿನ ಕಾಸರಕೊಡ ಗ್ರಾಮ ಪಂಚಾಯತಿಯಲ್ಲಿ ವ್ಯಾಪ್ತಿಯಲ್ಲಿ ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಲೂಕಿನ ಕೆಳಗಿನೂರ ಸಾಲೆಬೈಲ್ ನಿವಾಸಿ ಚಂದ್ರು ಗಣಪತಿ ಆಚಾರಿ (55), ರಸ್ತೆ ದಾಟುತ್ತಿದ್ದ ಸಮಯದಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು, ವಾಹನ ನಿಲ್ಲಿಸದೆ ಪರಾರಿಯಾಗಿದೆ.

RELATED ARTICLES  ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್..!

ರಸ್ತೆಯಲ್ಲಿ ಬಿದ್ದಿದ ವ್ಯಕ್ತಿಯನ್ನು ಸಾರ್ವಜನಿಕರು ಹೊನ್ನಾವರ ತಾಲೂಕಾ ಆಸ್ಪತ್ರೆಗೆ ಸಾಗಿಸಿದ್ದು, ಇನ್ನು ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಿ, ಬಳಿಕ ಮಂಗಳೂರು ಖಾಸಗಿ ಆಸ್ಪತ್ರೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಈ ಘಟನೆಗೆ ಸಂಬಂಧ ಬಗ್ಗೆ ಮಂಕಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಮುಕ್ತಾಯಗೊಂಡ ರವಿರಾಜ ಟ್ರೋಫಿ : Raj XI ಅಂಕೋಲಾದ ಮುಡಿಗೆ ಟ್ರೋಫಿ.