ಸಿದ್ದಾಪುರ: ಅನಾರೋಗ್ಯದಿಂದ ನಿಧನರಾದ ಭಾರತೀಯ ಸೈನ್ಯದ ವೀರ ಯೋಧ ಗಿರೀಶ ನಾಯ್ಕ ಅವರ ಅಂತ್ಯ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. ವೀರ ಯೋಧನ ನಿಧನಕ್ಕೆ ಮನ್ಮನೆ ಊರಿಗೆ ಊರೇ ಮರುಗಿತ್ತು. ಸಾವಿರಾರು ಜನರು ಗಿರೀಶ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.


ಪುಣೆಯ ಮಿಲಿಟರಿ ಆಸ್ಪತ್ರೆಯಿಂದ ಹುಟ್ಟೂರಾದ ಸಿದ್ದಾಪುರ ತಾಲೂಕಿನ ಮನಮನೆಗೆ ಗಿರೀಶ ಅವರ ಪಾರ್ಥಿವ ಶರೀರವನ್ನು ಬುಧವಾರ ರಾತ್ರಿ ತರಲಾಗಿದ್ದು, ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ತಾಲೂಕಾ ಆಡಳಿತದ ವತಿಯಿಂದ ಭಾರತಾಂಬೆಯ ಹೆಮ್ಮೆಯ ಪುತ್ರನಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮೂರು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿ ಪಾರ್ಥಿವ ಶರೀರಕ್ಕೆ ಗೌರವ ಸಲ್ಲಿಸಿ ಅಂತಿಮ ವಿಧಿ-ವಿಧಾನ ನೆರವೇರಿಸಲಾಯಿತು.

RELATED ARTICLES  ಭಟ್ಕಳ : ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನ : ಈರ್ವರು ಅರೆಸ್ಟ್..!


ತಾಲೂಕಾ ದಂಡಾಧಿಕಾರಿ ಎಂ.ಆರ್.ಕುಲಕರ್ಣಿ, ತಾಲೂಕಾ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ದೇವರಾಜ ಹಿತಲಕೊಪ್ಪ, ಪಿಎಸೈ ಅನಿಲ ಹಾಗೂ ಪೊಲೀಸ್ ಸಿಬ್ಬಂದಿಗಳು, ಮಾಜಿ ಸೈನಿಕರುಗಳು ಇದ್ದು ಅಂತಿಮ ನಮನ ಸಲ್ಲಿಸಿದರು.

RELATED ARTICLES  ಭೀಕರ ಅಪಘಾತ : ಓರ್ವ ಸ್ಥಳದಲ್ಲಿಯೇ ಸಾವು.

ಪುಣೆಯಿಂದ ಪಾರ್ಥಿವ ಶರೀರವನ್ನು ಮನಮನೆಗೆ ತರುತ್ತಿದ್ದಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಸ್ಥಳಕ್ಕೆ ಆಗಮಿಸಿ ಗಿರೀಶ ನಾಯ್ಕ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ, ಮಾಜಿ ಅಧ್ಯಕ್ಷ ಕೆ.ಜಿ.ನಾಗರಾಜ ಸೇರಿದಂತೆ ಸಾವಿರಾರು ಜನ ಗಿರೀಶ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಿದರು.