ದಾಂಡೇಲಿ: ಮಾರುತಿ ನಗರದ ನಿವಾಸಿ ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 15 ವರ್ಷ ವಯಸ್ಸಿನ ಅನ್ನಮ್ಮ ಸ್ಯಾಮುವೆಲ್ ಆತ್ಮಹತ್ಯೆಗೆ ಶರಣಾದ ಬಾಲಕಿ. ಈಕೆ ಮಾರುತಿನಗರದಲ್ಲಿರುವ ತನ್ನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ದಾಂಡೇಲಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES  ಬಸ್ ಬಿಡಿ ಪ್ಲೀಸ್..! ಮನವಿ ಸಲ್ಲಿಸಿದ ವಿದ್ಯಾರ್ಥಿಗಳು

ಮೃತದೇಹವನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆ ಕರೆದೊಯ್ದು, ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.‌ ನಗರದ ಜನತಾ ವಿದ್ಯಾಲಯ ಪ್ರೌಢಶಾಲೆಯ ಕನ್ನಡ ಮಾಧ್ಯಮದ 10ನೇ ತರಗತಿಯಲ್ಲಿ ಓದುತ್ತಿದ್ದ ಅನ್ನಮ್ಮ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಅತ್ಯುತ್ತಮ ಕ್ರೀಡಾಪಟುವಾಗಿ, ಕರಾಟೆ ಪಟುವಾಗಿ ಗಮನ ಸೆಳೆದಿದ್ದಳು. ಕಲಿಕೆಯಲ್ಲಿಯೂ ಮುಂದಿದ್ದ ಈಕೆ ಸದಾ ಕ್ರೀಯಾಶೀಲ ವಿದ್ಯಾರ್ಥಿನಿಯಾಗಿದ್ದಳು. ಈ ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES  ಪ್ರಾಮಾಣಿಕತೆ ಮೆರೆದು ಮಾದರಿಯಾದ ಚಾಲಕ

ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ ಮೃತ ವಿದ್ಯಾರ್ಥಿನಿಯ ಆತ್ಮಕ್ಕೆ ಶಾಂತಿಕೋಡಿ ಮೌನಪ್ರಾರ್ಥನೆಯನ್ನು ಸಲ್ಲಿಸಿ, ಮೃತಳ ಗೌರವಾರ್ಥ ಶಾಲೆಗೆ ಒಂದು ದಿನದ ರಜೆ ಸಾರಲಾಯಿತು.