ಕುಮಟಾ : ಕುಮಟಾ ಕನ್ನಡ ಸಂಘ ಹಾಗೂ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ಮಾಧ್ಯಮ ಯಾನ-ಸಾಧಕ ವಿದ್ಯಾರ್ಥಿಗಳಿಗೆ ಸಮ್ಮಾನ ಕಾರ್ಯಕ್ರಮ ಪಟ್ಟಣದ ಚಿತ್ರಗಿಯ ಮಹತ್ಮಾ ಗಾಂಧಿ ಪ್ರೌಢಶಾಲೆಯಲ್ಲಿ ಅ. 12 ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಕುಮಟಾ ಕನ್ನಡ ಸಂಘದ ಅಧ್ಯಕ್ಷ
ಸದಾನಂದ ದೇಶಭಂಡಾರಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲೂಕಿನಲ್ಲಿ 2022-2023 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿ ಗರಿಷ್ಟ ಅಂಕಗಳನ್ನು ಪಡೆದ ಹತ್ತು ಸಾಧಕ ವಿದ್ಯಾರ್ಥಿಗಳಿಗೆ ನಗದು, ಪ್ರಶಸ್ತಿ ಪತ್ರ ಹಾಗೂ ಶಾಲು ಗೌರವದೊಂದಿಗೆ ಸಮ್ಮಾನಿಸಲಾಗುವುದು.
ಕಾರ್ಯಕ್ರಮದಲ್ಲಿ ಪತ್ರಿಕಾ ದಿನಾಚರಣೆಯ ಅಂಗವಾಗಿ ಮಾಧ್ಯಮ ಜಗತ್ತು ನಡೆದು ಬಂದ ದಾರಿ ಎಂಬ ವಿಷಯದ ಕುರಿತು
ಡಾ.ಎ ವಿ ಬಾಳಿಗಾ ವಾಣಿಜ್ಯ ಮಹಾ ವಿದ್ಯಾಲಯದ ಪ್ರಾದ್ಯಾಪಕ ಡಾ. ಅರವಿಂದ ನಾಯಕ ಮಾತನಾಡಲಿದ್ದಾರೆ.
ಕಾರವಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ವಿಜ್ಞಾನಿ ಶ್ರೀಮತಿ ಆಶಾ ಎಮ್ ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಭಟ್ಟ, ಆರಕ್ಷಕ ಉಪನಿರೀಕ್ಷಕ ನವೀನ ನಾಯ್ಕ, ಮಹಾತ್ಮಾ ಗಾಂಧಿ ಪ್ರೌಢಶಾಲೆಯ ಮುಖ್ಯೋದ್ಯಾಪಕ ಪಾಂಡುರಂಗ ವಾಘ್ರೇಕರ್ ಮೊದಲಾದವರು ಪಾಲ್ಗೋಳ್ಳಲಿದ್ದಾರೆ.
ಕನ್ನಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದು ಅವರು ವಿನಂತಿಸಿದ್ದಾರೆ.