ಕುಮಟಾ : ಶಿಕ್ಷಣ ಕ್ಷೇತ್ರ ಹಾಗೂ ಆರೋಗ್ಯ ಕ್ಷೇತ್ರದ ಅಭಿವೃದ್ಧಿಗೆ ಕುಮಟಾ ಹಾಗೂ ಹೊನ್ನಾವರದಲ್ಲಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದೇನೆ. ಶಾಲಾ ಕಟ್ಟಡಗಳು, ಕಾಲೇಜು ಕಟ್ಟಡಗಳು ಇವುಗಳಿಗೆ ಬಿಜೆಪಿ ಸರಕಾರದ ಅವಧಿಯಲ್ಲಿ ಸಾಕಷ್ಟು ಅನುದಾನ ತಂದು ಶೈಕ್ಷಣಿಕ ಪೂರಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸುಸ್ಥಿರ ಸಮಾಜ ನಿರ್ಮಾಣಕ್ಕೆ ಶ್ರಮಿಸುತ್ತಿದ್ದೇನೆ ಎಂದು ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಹೇಳಿದರು. ಕುಮಟಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ, ಬಹುಮಾನ ವಿತರಣೆ ಹಾಗೂ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವಿಭಾಗ, ಎನ್. ಎಸ್. ಎಸ್., ಯುವ ರೆಡ್ ಕ್ರಾಸ್ ರೇಂಜರ್ಸ್  & ರೋವರ್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

RELATED ARTICLES  ಚುನಾವಣೆ ಬಹಿಷ್ಕಾರ ಮಾಡೋದಾಗಿ ಎಚ್ಚರಿಸಿದ ಮೀನುಗಾರರು.

ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಮುಂದೆ ಬಂದಾಗ ಮಾತ್ರ ಸಮಾಜದ ಉನ್ನತಿ ಸಾಧ್ಯ. ಹೀಗಾಗಿ ಬಿಜೆಪಿ ಸರಕಾರದ ಅವಧಿಯಲ್ಲಿ ಕಾಲೇಜು ಕಟ್ಟಡಕ್ಕೆ ಬೇಕಾದ ಅನುದಾನವನ್ನು ತಂದು ಮುತುವರ್ಜಿ ವಹಿಸಿ ಕಾಮಗಾರಿಯನ್ನು ನಡೆಸಿಕೊಟ್ಟಿದ್ದೇನೆ. ಅದೇ ರೀತಿ ಕುಮಟಾ ಸರಕಾರಿ ಆಸ್ಪತ್ರೆಯಲ್ಲಿಯೂ ಖಾಸಗಿ ಕಂಪನಿಯವರ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದು, ಬೇಕಾಗುವ ಯಂತ್ರೋಪಕರಣಗಳನ್ನು ತರಿಸಿ ವೈದ್ಯಕೀಯ ವಿಭಾಗವನ್ನು ಸಾಕಷ್ಟು ವ್ಯವಸ್ಥಿತಗೊಳಿಸಿದ್ದೇನೆ. ಶಿಕ್ಷಣ ಕ್ಷೇತ್ರ ಹಾಗೂ ಆರೋಗ್ಯ ಕ್ಷೇತ್ರ ಬಹಳ ಮುಖ್ಯವಾಗಿದ್ದು, ಇನ್ನು ಮುಂದೆಯೂ ಜನಸಾಮಾನ್ಯರ ಅಗತ್ಯಕ್ಕೆ ಅನುಕೂಲವಾಗಿ ಬೇಕಾಗುವ ಎಲ್ಲ ವಿಧದ ವ್ಯವಸ್ಥೆಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಅವರು ಹೇಳಿದರು.

RELATED ARTICLES  ಪ್ರವಾಹ ಬಂದರೂ ಕುಡಿಯಲು ಇಲ್ಲ ಸೂಕ್ತ ನೀರು: ಜನತೆಗೆ ಬೇಕಿದೆ ಜೀವ ಜಲ..!

ಕುಮಟಾ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ವಿಜಯಾ ಡಿ. ನಾಯ್ಕ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕುಮಟಾ ಉಪವಿಭಾಗಾಧಿಕಾರಿ ಕಲ್ಯಾಣಿ ವೆಂಕಟೇಶ ಕಾಂಬಳೆ, ಆರಕ್ಷಕ ನಿರೀಕ್ಷಕ ತಿಮ್ಮಪ್ಪ ನಾಯ್ಕ, ಆರಕ್ಷಕ ಉಪನಿರೀಕ್ಷಕ ಸಂಪತ್ ಇ. ಸಿ., ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು, ಉಪನ್ಯಾಸಕರು, ವಿದ್ಯಾರ್ಥಿ ಪ್ರತಿನಿಧಿಗಳು ವೇದಿಕೆಯಲ್ಲಿ ಇದ್ದರು.