ಕುಮಟಾ : ಬೆಂಗಳೂರು ಮೂಲದ ವ್ಯಕ್ತಿ ಓರ್ವ ಗೋಕರ್ಣದ ರೆಸಾರ್ಟ್‌ ಒಂದರಲ್ಲಿ ವಾಸ್ತವ್ಯ ಮಾಡಿದ್ದು, ತಾನು ಉಳಿದುಕೊಂಡಿದ್ದ ರೂಂನಲ್ಲಿಯೇ ನೇಣುಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ರಿಷಿಕೇಶ ರೆಡ್ಡಿ (35) ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಯಾಗಿದ್ದು, ಈತ ಗೋಕರ್ಣದ ಓಂ ಬೀಚ್ ರೆಸಾರ್ಟ್’ನಲ್ಲಿ ರೂಂ ಬಾಡಿಗೆಗೆ ಪಡೆದುಕೊಂಡಿದ್ದ ಎನ್ನಲಾಗಿದ್ದು, ಆತನ ಆತ್ಮಹತ್ಯೆಗೆ ನಿಖರವಾಗಿರುವ ಕಾರಣ ತಿಳಿದುಬಂದಿಲ್ಲ.

RELATED ARTICLES  ಭೀಮಣ್ಣ ಪರ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ರೋಡ್ ಶೋ.

ಮೃತ ದೇಹವನ್ನು ಗೋಕರ್ಣ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು, ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

RELATED ARTICLES  ಕುಮಟಾದಲ್ಲಿ ಭಜರಂಗಿಯ ಪವಾಡ ಕಂಡು ದಂಗಾದ ಜನರು