ಕುಮಟಾ : ಧ್ವಜಾರೋಹಣಕ್ಕೆಂದು ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರಿಗೆ ಬೋಲೆರೋ ವಾಹನ ಡಿಕ್ಕಿ ಹೊಡೆದು ಶಿಕ್ಷಕ ಸ್ಥಳದಲ್ಲೆ ಮೃತಪಟ್ಟಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಕಾರ ಕ್ರಾಸ್ ಸಮೀಪ ನಡೆದಿದೆ.

ಅಪಘಾತದಲ್ಲಿ ಹೆಗಡೆ ಗ್ರಾಮದ ಮೇಲಿನಕೇರಿ ನಿವಾಸಿಯಾಗಿದ್ದ ಗೋಪಾಲ ಪಟಗಾರ (50) ಎಂಬುವವರೆ ಮೃತಪಟ್ಟಿರುವ ಶಿಕ್ಷಕರಾಗಿದ್ದಾರೆ. ಇವರು ಗುಡೇಅಂಗಡಿ ಶಾಲೆ ಶಿಕ್ಷಕರಾಗಿದ್ದು, ಧ್ವಜಾರೋಹಣಕ್ಕಾಗಿ ಬೆಳಿಗ್ಗೆ ಹೆಗಡೆಯ ಮೇಲಿನ ಕೇರಿಯಲ್ಲಿರುವ ತಮ್ಮಮನೆಯಿಂದ ಬೈಕ್ ಮೇಲೆ ಶಾಲೆಗೆ ಹೋಗುತ್ತಿದ್ದಾಗ ಹಿಂಬದಿಯಿಂದ ಅತೀವವಾಗಿ ಬಂದ ಬೋಲೆರೋ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದ್ದು ಇದರಿಂದಾಗಿ ಶಿಕ್ಷಕ ಗೋಪಾಲ ಪಟಗಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ.

RELATED ARTICLES  ಮಕ್ಕಳನ್ನು ಶಾಲೆಗೆ ಆಕರ್ಷಿಸುವ ಹೊಸ ಪ್ರಯತ್ನ: ಮಾದರಿಯಾಯ್ತು ರೈಲು ಭೋಗಿ ಹೋಲುವ ಶಾಲೆ.

ಘಟನಾ ಸ್ಥಳಕ್ಕೆ ಕುಮಟಾ ಪೊಲೀಸ್ ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.