ಭಟ್ಕಳ: ತಾಲೂಕಿನ ಜಾಲಿ ಪಟ್ಟಣ ಪಂಚಾಯತ್
ವ್ಯಾಪ್ತಿಯ ವೆಂಕಟಾಪುರ ಗ್ರಾಮದ ಗೋಡೌನ್ ಮೇಲೆ ಖಚಿತ ಮಾಹಿತಿಯ ಮೇರೆಗೆ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಚಂದನ್ ಗೋಪಾಲ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ. ಅಂದಾಜು 102 ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಪಡಿತರ ಅಕ್ಕಿಯನ್ನು ವಶಕ್ಕೆ ಪಡೆದು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

RELATED ARTICLES  ಕೊಂಕಣದಲ್ಲಿ ಸಂಭ್ರಮದ ಸ್ವಾತಂತ್ರ್ಯ ಅಮೃತ ಮಹೋತ್ಸವ.

ಇನ್ಸ್ಪೆಕ್ಟರ್ ಚಂದನ್ ಗೋಪಾಲ್ ಹಾಗೂ ಆಹಾರ ನಿರೀಕ್ಷಕ ಪಾಂಡು ನಾಯ್ಕ ಹಾಗೂ ಜಾಲಿ ಗ್ರಾಮ ಆಡಳಿತಾಧಿಕಾರಿ ಕೆ ಶಂಭು,ಗ್ರಾಮಸಹಾಯಕ ವಾಸು ಶೇಟಿ ಮತ್ತು ಗ್ರಾಮೀಣ ಠಾಣೆಯ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ
ಗೋಡೌನ್‌ನಲ್ಲಿದ್ದ ಅಕ್ಕಿಯನ್ನು ಪತ್ತೆ ಹಚ್ಚಿದ್ದು ಅಕ್ಕಿಯೊಂದಿಗೆ ಆರೋಪಿಗಳಾದ ಗುಲಾಬ್ ಸಾಬ್, ಅಬ್ದುಲ್ ರೆಹಮಾನ್ ಹಾಗೂ ಇಮ್ಮಿಯಾಜ್ ಎನ್ನುವವರನ್ನು ವಶಕ್ಕೆ ಪಡೆದಿದ್ದಾರೆ.

RELATED ARTICLES  ಅಂಕೋಲಾ ತಾಲೂಕಿನ ಹೆಮ್ಮೆಯ ಪುತ್ರ ಸಾಧನೆ: ರಾಜ್ಯ ಕ್ರಿಕೆಟ್ನಲ್ಲಿ “ಲೆಗ್ ಸ್ಪಿನ್ನರ್”ಆಶಿಶ್ ವಿಕಾಸ ಸರ್ವಕಾಲಿಕ ದಾಖಲೆ