ಹಿಂದಿ ಹಾಗೂ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಫೇಮಸ್ ಆದ ಮಂಡ್ಯ ಮೂಲದ ಪವನ್ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ, ಅವರಿಗೆ 25 ವರ್ಷ ವಯಸ್ಸಾಗಿತ್ತು.ಪವನ್ ಮುಂಬೈನಲ್ಲಿಯೇ ನೆಲೆಸಿದ್ದರು. ಇವರು ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿ‌ನ ಹರಿಹರಪುರ ಗ್ರಾಮದವರು. ಹಿಂದಿ, ತಮಿಳು ಕಿರುತೆರೆಯಲ್ಲಿ ಕಲಾವಿದರಾಗಿ ನಟಿಸುತ್ತಿದ್ದರು.

RELATED ARTICLES  ಪರಿಸರ ಸ್ನೇಹಿ ತೆಂಗಿನಕಾಯಿ ಗಣಪತಿ ಬಿಡುಗಡೆ: ವಿನೂತನ ಗಣಪನನ್ನು ಪರಿಚಯಿಸಿದ ವೀರೇಂದ್ರ ಹೆಗ್ಗಡೆ

ಸಿನಿಮಾಗಳಲ್ಲಿ ಅಭಿನಯಿಸಿ, ಬೆಳ್ಳಿತೆರೆಯಲ್ಲಿ ಮಿಂಚಬೇಕೆಂದು ಕನಸ್ಸು ಕಂಡಿದ್ದ ಪವನ್ ತಂದೆ ನಾಗರಾಜು ಹಾಗೂ ತಾಯಿ ಸರಸ್ವತಿಯೊಂದಿಗೆ ಮುಂಬೈನಲ್ಲಿ ನೆಲೆಸಿದ್ದರು, ಗುರುವಾರ (ಆ.17) ನಸುಕಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

RELATED ARTICLES  ಹೊನ್ನಾವರ, ಸಿದ್ದಾಪುರದಲ್ಲಿ ಎಲ್ಲೆಲ್ಲಿ ನಾಳೆ ಲಸಿಕಾಕರಣ..?

ಇಂದು ಹುಟ್ಟೂರಿನಲ್ಲಿ ಮೃತ ಯುವ ನಟನ ಅಂತ್ಯಸಂಸ್ಕಾರ ನಡೆಯಲಿದೆ. ಮಗನನ್ನು ಕಳೆದುಕೊಂಡು ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.