ಬೆಂಗಳೂರುಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ(ಇಸ್ರೋ) ಮೂರನೇ ಚಂದ್ರಯಾನ-3ರ ವಿಕ್ರಮ್ ಲ್ಯಾಂಡರ್ ಇಂದು ಸಂಜೆ ಸುಮಾರು 6.04 ಕ್ಕೆ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಲ್ಯಾಂಡಿಂಗ್ ಮಾಡಿದೆ.ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ 3 ಇಂದು ಸಂಜೆ 6.04ಕ್ಕೆ ಸರಿಯಾಗಿ ಚಂದ್ರನ ಮೇಲ್ಮೈ ಮೇಲೆ ಸಾಫ್ಟ್ ಲ್ಯಾಂಡ್ ಆಗಿದೆ. ಚಂದ್ರನ ದಕ್ಷಿಣ ಧ್ರುವವನ್ನು ಚಂದ್ರಯಾನ 3ಕ್ಕೆ ಇಳಿಯುವ ಸ್ಥಳವಾಗಿ ನಿಗದಿಪಡಿಸಲಾಗಿತ್ತು. ಇದು ಶಾಶ್ವತ ನೆರಳಿನ ಪ್ರದೇಶವಾಗಿದ್ದು, ವಿಜ್ಞಾನಿಗಳು ಇಲ್ಲಿ ಸಂಪನ್ಮೂಲಗಳು ಸಮೃದ್ಧವಾಗಿದೆ. ಭವಿಷ್ಯದಲ್ಲಿ ಮಾನವಸಹಿತ ಕಾರ್ಯಾಚರಣೆಗಳಿಗೆ ಸೂಕ್ತವಾದ ಲ್ಯಾಂಡಿಂಗ್ ಸೈಟ್ಗಳನ್ನು ನೀಡಬಹುದು ಎಂದು ನಂಬಿದ್ದಾರೆ.

RELATED ARTICLES  ದ.ಕ ದಲ್ಲಿ ಮಳೆಯ ಅಬ್ಬರ: ಜನ ಜೀವನ ಅಸ್ಥವ್ಯಸ್ಥ

ವಿಕ್ರಮ್ ಲ್ಯಾಂಡರ್ ಚಂದ್ರನ ಈ ಪ್ರದೇಶದಲ್ಲಿ ಮೊದಲ ಬಾರಿಗೆ ಇಳಿಯುವ ಮೂಲಕ ಇತಿಹಾಸ ನಿರ್ಮಿಸಿದೆ. ಲ್ಯಾಂಡರ್ ಮತ್ತು ರೋವರ್ ಒಂದು ಚಂದ್ರನ ದಿನದ (14 ಭೂಮಿಯ ದಿನಗಳು) ಮಿಷನ್ ಜೀವನವನ್ನು ಹೊಂದಿದ್ದು, ಈ ಸಮಯದಲ್ಲಿ ಅದು ಆನ್-ಸೈಟ್ ಪ್ರಯೋಗಗಳನ್ನು ನಡೆಸುತ್ತದೆ.

RELATED ARTICLES  ಹೆಬ್ಬಾವನ್ನೇ ನುಂಗಿದ ಕಾಳಿಂಗ : ಕಾರವಾರದಲ್ಲಿ ನಡೆದ ರೋಚಕ ಘಟನೆ

ವೇಗವನ್ನು ಕಡಿಮೆ ಮಾಡಲು ನಾಲ್ಕು ಥ್ರಸ್ಟರ್ ಎಂಜಿನ್‌ಗಳ ರೆಟ್ರೊ ಫೈರಿಂಗ್‌ನೊಂದಿಗೆ ವಿಕ್ರಮ್ ಲ್ಯಾಂಡರ್‌ನ ಚಾಲಿತ ಬ್ರೇಕಿಂಗ್ ಪ್ರಾರಂಭವಾಯಿತು. ನಂತರ ಕೊನೆಯ 17 ನಿಮಿಷಗಳು ಕಠಿಣ ಸವಾಲು ಎಂದು ವಿಜ್ಞಾನಿಗಳು ಹೇಳಿದ್ದರು.

ಭಾರತಕ್ಕೂ ಮುನ್ನ ಕೇವಲ ಮೂರು ಇತರ ದೇಶಗಳು (ರಷ್ಯಾ, ಚೀನಾ ಮತ್ತು ಯುನೈಟೆಡ್ ಸ್ಟೇಟ್ಸ್) ಯಶಸ್ವಿಯಾಗಿ ಚಂದ್ರನ ಮೇಲೆ ರೋವರ್ ಅನ್ನು ಇಳಿಸಿವೆ.