ಭಟ್ಕಳ: ಭಟ್ಕಳದ ಮುಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಹಳ್ಳಿಯಲ್ಲಿ ರಾಷ್ಟ್ರಪಕ್ಷಿ ನವಿಲನ್ನು ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪುರವರ್ಗ ಮುಗಳಿ ಹೊಂಡ ನಿವಾಸಿ ಇನಾಯತ್ ಉಲ್ಲಾ ಮೈಲಪ್ಪಿ (40) ಎಂದು ತಿಳಿದು ಬಂದಿದೆ.

 

ಈತ ಮುಟ್ಟಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಹಳ್ಳಿಯ ಅರಣ್ಯ ಪ್ರದೇಶದಲ್ಲಿ ತನ್ನ ಏರ್‌ಗನ್‌ನಿಂದ ಹೆಣ್ಣು ನವಿಲಿಗೆ ಗುಂಡು ಹಾರಿಸಿ ಕೊಂದಿದ್ದಾನೆ. ನಂತರ ನವಿಲನ್ನು ದ್ವಿಚಕ್ರ
ವಾಹನ ಸಂಖ್ಯೆ: KA-47 W -5566ರ ಡಿಕ್ಕಿಯಲ್ಲಿ
ಹಾಕಿಕೊಂಡು ಬೇಹಳ್ಳಿಯಿಂದ ಸಬತ್ತಿ ಕಡೆಗೆ ಹೋಗುವ ರಸ್ತೆಯಲ್ಲಿ ಸಾಗುತ್ತಿರುವಾಗ ಅರಣ್ಯ ಇಲಾಖೆಯ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

RELATED ARTICLES  ಹೆಬ್ಬಾವು ಮತ್ತು ಕಾಳಿಂಗನ ಸೆಣಸು ಬೆಚ್ಚಿಬಿದ್ದ ಮಿರ್ಜಾನ್ ಜನತೆ

 

ಈ ಕುರಿತಾಗಿ ವನ್ಯಜೀವಿ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಹೊನ್ನಾವರ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಭಟ್ಕಳ ಉಪವಿಭಾಗ ಅವರ ಮಾರ್ಗದರ್ಶನದಲ್ಲಿ , ಭಟ್ಕಳ ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ, ಹಾಗೂ ಉಪವಲಯ ಅರಣ್ಯಾಧಿಕಾರಿಗಳಾದ ಸಂದೀಪ ಭಂಡಾರಿ ಪಾಲ್ಗೊಂಡಿದ್ದರು.

RELATED ARTICLES  ಅಜಾಗರೂಕತೆಯಿಂದಾಗಿ ಹಾರಿಗೋಗುತ್ತಿದೆ ಅಮಾಯಕರ ಪ್ರಾಣ: ನಿರ್ದಾಕ್ಷಿಣ್ಯ ಕ್ರಮಕ್ಕೆ ಆಗ್ರಹ