Home Special News ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್ : ಓರ್ವ ಸಾವು.

ಪಾದಾಚಾರಿಗೆ ಡಿಕ್ಕಿ ಹೊಡೆದ ಬೈಕ್ : ಓರ್ವ ಸಾವು.

ಹೊನ್ನಾವರ : ಬೈಕ್ ಸವಾರನೊರ್ವ ಪಾದಚಾರಿಗೆ ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಗದೇ ಸಾವನ್ನಪ್ಪಿದ ಘಟನೆ ತಾಲೂಕಿನ ಕವಲಕ್ಕಿಯಲ್ಲಿ ಸಂಭವಿಸಿದೆ. ಮೃತಪಟ್ಟವನನ್ನು ಸಾಲ್ಕೋಡ ಗ್ರಾಮದ ಕೆರಮನೆಕಚ್ಚರಿಕೆಯ ವಿಷ್ಣು ಮೇಸ್ತ ಎಂದು ತಿಳಿದುಬಂದಿದೆ. ಕವಲಕ್ಕಿಯಲ್ಲಿ ಹೂವಿನ ಅಂಗಡಿ ಇಟ್ಟುಕೊಂಡು ವ್ಯಾಪಾರ ನಡೆಸುತ್ತಿದ್ದ. ಎಂದಿನಂತೆ ಅಂಗಡಿಗೆ ಬಂದಿರುವ ಹೂವನ್ನು ಪಡೆದು ರಸ್ತೆ ದಾಟುವಾಗ ವೇಗವಾಗಿ ಬಂದ ಬೈಕ್ ಡಿಕ್ಕಿಯಾಗಿದೆ.

ಬೈಕ್ ಡಿಕ್ಕಿಯಾದ ಪರಿಣಾಮ ರಸ್ತೆ ಮೇಲೆ ಬಿದ್ದಾಗ ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡದ್ದ, ತಕ್ಷಣ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದರು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಕುರಿತಾಗಿ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.