ಶಿರಸಿ : ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಅನಂತಮೂರ್ತಿ ಹೆಗಡೆ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ಪಾದಪೂಜೆ ಮತ್ತು ಭಿಕ್ಷಾ ವಂದನಾ ಸೇವೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅನಂತಮೂರ್ತಿ ಹೆಗಡೆಯವರು ಸಪತ್ನಿಕರಾಗಿ ಧಾರ್ಮಿಕ ಪೂಜಾ ಕೈಂಕರ್ಯ ಕೈಗೊಂಡು, ನಂತರ ಶ್ರೀಗಳಿಂದ ಆಶೀರ್ವಾದ ಮಂತ್ರಾಕ್ಷತೆ ಪಡೆದರು. ಶ್ರೀಗಳು ಈ ಸಂದರ್ಭದಲ್ಲಿಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ನ ಕಾರ್ಯಗಳ ಬಗ್ಗೆ ಮೆಚ್ಚುಗೆ ಸೂಚಿಸಿದರು. ಇನ್ನೂ ಹೆಚ್ಚಿನ ಸಾಮಾಜಿಕ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಆಶೀರ್ವದಿಸಿದರು.
ಆಟೋರಿಕ್ಷಾ ಹಾಗೂ ಗೂಡ್ಸ್ ರಿಕ್ಷಾ ಚಾಲಕ-ಮಾಲಕರಿಗೆ ಸಮವಸ್ತ್ರದ ಉಚಿತ ವಿತರಣೆ, ಔತಣಕೂಟ, ಆಟೋ ರಿಕ್ಷಾ ಪಾಸಿಂಗ್ ಯೋಜನೆ ಹಾಗೂ ಆಟೋ ರಿಕ್ಷಾ ಪ್ರಿಂಟಿಂಗ್ ಹುಡ್ ವಿತರಣೆ ಹಾಗೂ ಇನ್ನಿತರ ಕಾರ್ಯಗಳ ಮೂಲಕ ಟ್ರಸ್ಟ್ ಸಾಮಾಜಿಕ ಕಳಕಳಿಯ ಕಾರ್ಯ ಮಾಡುತ್ತಿದೆ.