ಹೊನ್ನಾವರ : ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರು ಹಾಗೂ ಭಾರತೀಯ ಜನತಾ ಪಕ್ಷದ ಹಿರಿಯ ಕಾರ್ಯಕರ್ತರಾಗಿದ್ದ ಸುಬ್ರಹ್ಮಣ್ಯ ಶಾಸ್ತ್ರೀ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು. ಇಂದು ಇಹಲೋಕ ಯಾತ್ರೆ ಮುಗಿಸಿದ್ದಾರೆ.

ಉದ್ಯಮಿಯಾಗಿ ಬೇರೆ ಬೇರೆ ಉದ್ಯಮದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ ಅವರು, ಬಡವರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವುದರ ಮೂಲಕ ತಮ್ಮದೇ ಆದ ಬಳಗವನ್ನು ಹೊಂದಿದ್ದರು. ತಮ್ಮ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಯಾವುದೇ ಕಾರ್ಯಗಳಿದ್ದರೂ ಸದಾ ಮಂದಿದ್ದು ಜನತೆಗೆ ನೆರವಾಗುತ್ತಿದ್ದವರು. ಅವರು ಮಡದಿ ಹಾಗೂ ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

RELATED ARTICLES  ನಾಳೆ ಕುಮಟಾ ಲಾಯನ್ಸ್ ಪದಾಧಿಕಾರಿಗಳ ಪದಗ್ರಹಣ

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಮತ್ತು ಕುಟುಂಬ ಸದಸ್ಯರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂಬುದು ಎಲ್ಲರ ಪ್ರಾರ್ಥನೆಯಾಗಿದೆ. ಇವರ ಅಗಲುವಿಕೆಗೆ ಶಾಸಕರಾದ ದಿನಕರ ಶೆಟ್ಟಿ ಹಾಗೂ ಹಲವು ಗಣ್ಯರು ಕಂಬನಿ ಮಿಡಿದಿದ್ದಾರೆ.

RELATED ARTICLES  ಪ್ರತಿಭಾ ಕಾರಂಜಿಯಲ್ಲಿ ಚಿತ್ರಿಗಿ ಪ್ರೌಢಶಾಲೆಯ ಸಾಧನೆ