ಕಾರವಾರ : ಹಿಂದೂ ದೇವರನ್ನು ಆಶ್ಲೀಲ ಪದಗಳಿಂದ ನಿಂದಿಸಿರುವ ಹಿನ್ನೆಲೆಯಲ್ಲಿ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ರವರನ್ನು ಕಾರವಾರ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ. ಯೇಸುವನ್ನು ಹೊಗಳಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದಲಿತ ಸಮುದಾಯದ ಜನರೇ ಆತನನ್ನು ಬಂಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಿದ್ದರು.

RELATED ARTICLES  ಜೆಡಿಎಸ್, ಬಿ.ಜೆ.ಪಿ ಗೆ ಗುಡ್ ಬೈ ಹೇಳಿ ಕಾಂಗ್ರೇಸ್ ಕೈ ಹಿಡಿದ ಕುಮಟಾದ ಪ್ರಮುಖರು.

ಇಂದು ಈತನ ಹೇಳಿಕೆಗೆ ಕಾರವಾರದ ಪೊಲೀಸ್ ಠಾಣೆ ಎದುರು ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹಿಂದೂ ದೇವತೆಗಳನ್ನು ನಿಂದಿಸಿದ್ದ ಎಲಿಷಾ ಎಲಕಪಾಟಿಯನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಂದು ಎಲಿಷಾ ಎಲಕಪಾಟಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

RELATED ARTICLES  ಉಡುಪಿ : ಫಾದರ್ ಮುಲ್ಲರ್ಸ್ ಚಾರಿಟೇಬಲ್ ಸಂಸ್ಥೆಯ ವಿಭಾಗ ಮುಖ್ಯಸ್ಥರಿಗೆ ಉದ್ಯಾವರದಲ್ಲಿ ಸನ್ಮಾನ