ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಿಂದೆ ಸಂಘಟ ಪರಿವಾರ ಇದೆ ಎಂದು ಹೇಳಿಕೆ ನೀಡಿದ್ದ ಲೇಖಕ ಹಾಗೂ ಇತಿಹಾಸಕಾರ ರಾಮಚಂದ್ರ ಗುಹಾ ವಿರುದ್ಧ ಬಿಜೆಪಿ ಯುವ ಮೋರ್ಚಾ ದೂರು ದಾಖಲಿಸಿದೆ.
ಸಂಘ ಪರಿವಾರದ ವಿರುದ್ಧ ಗುಹಾ ಅವರು ಆಧಾರವಿಲ್ಲದ ಆರೋಪಗಳನ್ನು ಮಾಡಿದ್ದು ವರ್ಚಸ್ಸಿಗೆ ದಕ್ಕೆ ತಂದಿದ್ದಾರೆ. ಇಂತಹ ಸುಳ್ಳು ಆರೋಪಗಳನ್ನು ಮಾಡುತ್ತಾ ಸಾರ್ವಜನಿಕರನ್ನು ಹಾದಿ ತಪ್ಪಿಸುತ್ತಿದ್ದಾರೆ ಹೀಗಾಗಿ ಅವರು ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಬೇಕು ಎಂದು ಬಿಜೆಪಿ ಯುವ ಮೋರ್ಚಾ ಆಗ್ರಹಿಸಿದೆ.
ಬೆಂಗಳೂರು ನಗರದ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿ ಸಂಕೀತ್ ತಡಿ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 11ರಂದು ಯುವ ಮೋರ್ಚಾ ಗುಹಾ ಅವರಿಗೆ ನೋಟಿಸ್ ನೀಡಿದ್ದು ಮೂರು ದಿನದೊಳಗಾಗಿ ಬೇಷರತ್ ಕ್ಷಮೆ ಯಾಚಿಸಬೇಕು ಇಲ್ಲದಿದ್ದರೆ ಸಿವಿಲ್ ಮತ್ತು ಕ್ರಿಮಿನಲ್ ದಾವೆ ಹೂಡುವುದಾಗಿ ಎಚ್ಚರಿಕೆ ನೀಡಿತ್ತು.
ಸೆಪ್ಟೆಂಬರ್ 5ರಂದು ಬೆಂಗಳೂರಿನ ನಿವಾಸದ ಎದುರು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅಪರಿಚಿತರು ಗುಂಡಿಟ್ಟು ಹತ್ಯೆ ಮಾಡಿ ಪರಾರಿಯಾಗಿದ್ದರು. ಹತ್ಯೆ ನಂತರ ನಕ್ಸಲೀಯರ ಕೈವಾಡ ಹಾಗೂ ಬಲಪಂಥಿಯ ಕಾರ್ಯಕರ್ತರ ಪಾಲ್ಗೊಂಡ ಬಗ್ಗೆ ಗುಮಾನಿಗಳು ಎದ್ದಿದ್ದವು.