ನನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ಬರೆದಿಟ್ಟು ಶಿಕ್ಷಕಿಯವರುಗಳು ಸಾವಿಗೆ ಶರಣಾದ ಘಟನೆ ಸಿದ್ದಾಪುರ ತಾಲೂಕಿನಲ್ಲಿ ನಡೆದಿದೆ. ಸಿದ್ದಾಪುರ ತಾಲೂಕಿನ ಕೆಳಗಿನ ಸರಕುಳಿಯಲ್ಲಿ ಈ ಘಟನೆ ಸಂಭವಿಸಿದ್ದು, ಕಿಬ್ಬಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ನೇತ್ರಾವತಿ ಗೌಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಾಲೂಕಿನ ಕೆಳಗಿನ ಸರಕುಳಿಯಲ್ಲಿರುವ ತಮ್ಮ ಮನೆಯಲ್ಲಿ ಇವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿವಾಹದ ನಂತರ, ಇದೀಗ ಕೆಲ ವರ್ಷಗಳ ಹಿಂದೆ ವಿವಾಹ ವಿಚ್ಛೇದನ ಪಡೆದು ತನ್ನ ಮನೆಯಲ್ಲಿ ವಾಸಿಸುತ್ತಿದ್ದ ಇವರು ಅದು ಯಾವ ಕಾರಣದಿಂದ ಆತ್ಮಹತ್ಯೆ ಶರಣಾಗಿದ್ದಾರೆ ಎಂದು ಬಗ್ಗೆ ಪೂರ್ಣ ಮಾಹಿತಿ ಲಭ್ಯವಿಲ್ಲವಾಗಿದೆ. ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಡೆತ್ ನೋಟ್ ನಲ್ಲಿ ಇವರು ಬರೆದಿಟ್ಟಿದ್ದಾರೆ ಎನ್ನಲಾಗಿದೆ. ಘಟನೆಯ ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಮುಂದಿನ ಪ್ರಕ್ರಿಯೆ ಕೈಗೊಂಡಿದ್ದಾರೆ.
ವಿವಾಹದ ನಂತರ ದಾಂಪತ್ಯ ಜೀವನ ಸರಿ ಬಾರದೆ ಗಂಡನಿಂದ ಡೈವೋರ್ಸ್ ಪಡೆದುಕೊಂಡು ತಾಯಿಯ ಮನೆಯಲ್ಲಿ ವಾಸವಿದ್ದು ಕಿಬ್ಬಳ್ಳಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದಳು ಡೈವೋರ್ಸ್ ಆದಾಗಿನಿಂದ ಯಾರೊಂದಿಗೂ ಹೆಚ್ಚು ಬೆರೆಯುತ್ತಿರಲಿಲ್ಲ ಈ ಮದ್ಯೆ ತನ್ನ ತಾಯಿಯ ಅರೋಗ್ಯ ಸರಿ ಇಲ್ಲದೆ ಚಿಕಿತ್ಸೆ ಪಡೆಯುತ್ತಿದ್ದು ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಮನೆಯ ಮೇಲ್ಚಾವಣಿ ಗಳಕ್ಕೆ ಚೂಡಿದಾರದ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಘಟನೆಗೆ ಸಂಬಂದಿಸಿದಂತೆ ಸಿದ್ದಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.