ಬೆಂಗಳೂರು : ಶ್ರೀಹರಿಕೋಟಾದಲ್ಲಿ ರಾಕೆಟ್ ಉಡಾವಣೆಗಾಗಿ ಕ್ಷಣಗಣನೆಯಲ್ಲಿ ಧ್ವನಿ ನೀಡುತ್ತಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಿಜ್ಞಾನಿ ವಲರ್ಮತಿ ಅವರು ಹೃದಯ ಸ್ತಂಭನದಿಂದ ನಿಧನರಾಗಿದ್ದಾರೆ.

ದೇಶದ ಮೂರನೇ ಚಂದ್ರಯಾನವಾದ ಚಂದ್ರಯಾನ-3 (Chandrayaan-3) ರಾಕೆಟ್ ಉಡಾವಣೆಯ ಸಂದರ್ಭದಲ್ಲೂ ಸಹಾ ಕೌಂಟ್‌ಡೌನ್‌ಗೆ ಅವರು ಧ್ವನಿ ನೀಡಿದ್ದು, ಇಸ್ರೋದಲ್ಲಿ ಅದು ಅವರ ಕೊನೆಯ ಧ್ವನಿಯಾಗಿತ್ತು. ಜುಲೈ 14 ರಂದು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ಅನ್ನು ಉಡಾವಣೆ ಮಾಡಲಾಯಿತು.

RELATED ARTICLES  ಇನ್ಮುಂದೆ ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬ್ಯಾಂಕಿಂಗ್ ಪರೀಕ್ಷೆ ಬರೆಲು ಅವಕಾಶ: ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ.

2015 ರಲ್ಲಿ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಗೌರವಾರ್ಥವಾಗಿ ತಮಿಳುನಾಡು ಸರ್ಕಾರವು ಸ್ಥಾಪಿಸಿದ ಅಬ್ದುಲ್ ಕಲಾಂ ಪ್ರಶಸ್ತಿಯನ್ನು ಪಡೆದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

RELATED ARTICLES  ಸತತ ಸೋಲಿನ ಬಳಿಕ ಐದನೇ ಪರೀಕ್ಷೆಯಲ್ಲಿ ಯಶಸ್ಸು ಸಾಧಿಸಿದ 'ನಿರ್ಭಯ್'!

ಅವರ ನಿಧನಕ್ಕೆ ಇಸ್ರೋದ ಮಾಜಿ ನಿರ್ದೇಶಕರಾದ ಡಾ.ಪಿ.ವಿ.ವೆಂಕಟಕೃಷ್ಣನ್ ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಶ್ರೀಹರಿಕೋಟಾದಿಂದ ಇಸ್ರೋದ ಭವಿಷ್ಯದ ಮಿಷನ್‌ಗಳ ಕೌಂಟ್‌ಡೌನ್‌ಗಳಿಗೆ ವಲರ್ಮತಿ ಮೇಡಂ ಅವರ ಧ್ವನಿ ಇರುವುದಿಲ್ಲ. ಚಂದ್ರಯಾನ-3 ಅವರ ಅಂತಿಮ ಕೌಂಟ್‌ಡೌನ್ ಘೋಷಣೆಯಾಗಿತ್ತು. ಅವರು ಅನಿರೀಕ್ಷಿತವಾಗಿ ನಿಧನರಾಗಿದ್ದಾರೆ ಎಂದು ಸಂತಾಪ ಸೂಚಿಸಿದ್ದಾರೆ.