ಕುಮಟಾ : ಕೇವಲ ವರ್ಗಕೋಣೆಯೊಳಗೆ ವಿದ್ಯಾರ್ಥಿಗಳ ಸಂಪೂರ್ಣ ವ್ಯಕ್ತಿತ್ವದ ವಿಕಸನ ಸಾಧ್ಯವಿಲ್ಲ. ಅದು ಪೂರ್ಣವಾಗಲು ಆಟೋಟ ಸ್ಪರ್ಧೆಗಳು ಅಗತ್ಯ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು. ಅವರು ಗೋಕರ್ಣದ ಸಂಯುಕ್ತ ಪದವಿಪೂರ್ವ ಕಾಲೇಜಿನ ಸುಧಾ ನಾರಾಯಣ ಪೈ ಕ್ರೀಡಾಂಗಣದಲ್ಲಿ ನಡೆದ ಕುಮಟಾ ತಾಲೂಕಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ 2023-24ನೇ ಸಾಲಿನ ಇಲಾಖಾ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳಿಂದ ಕ್ರೀಡಾ ಜ್ಯೋತಿ ಸ್ವೀಕರಿಸಿ, ನಂತರ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.

ವಿದ್ಯಾರ್ಥಿಗಳು ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ. ಅಲ್ಲದೆ ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ವೃದ್ಧಿಯಾಗಲು ಕೂಡ ಆಟಗಳು ಮುಖ್ಯ ಪಾತ್ರವಹಿಸುತ್ತವೆ. ಕೇವಲ ಬಹುಮಾನ ಗೆಲ್ಲುವುದನ್ನೇ ಮುಖ್ಯ ಗುರಿಯಾಗಿ ಇಟ್ಟುಕೊಳ್ಳದೆ, ಕ್ರೀಡಾ ಸ್ಫೂರ್ತಿಯೊಡನೆ ಆಟಗಳಲ್ಲಿ ಭಾಗವಹಿಸಿ ತನ್ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸಿ ಎಂದು ವಿದ್ಯಾರ್ಥಿಗಳಿಗೆ ಕರೆನೀಡಿದರು. ಅಲ್ಲದೆ ಕ್ರೀಡಾಕೂಟವನ್ನು ಅಚ್ಚುಕಟ್ಟಾಗಿ ಸಂಘಟನೆ ಮಾಡಿದುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

RELATED ARTICLES  ಶ್ರೀ ದಿವಾಕರ ಸ್ವಾಮೀಜಿಗೆ ಗೋಕರ್ಣ ಗೌರವ

ಗೋಕರ್ಣ ಗ್ರಾಮಪಂಚಾಯತ್ ಅಧ್ಯಕ್ಷೆ ಸುಮನಾ ಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ನಾಕ್ತಾಲ ದಿನ್ನೆ ರೆಬೆಲ್ಲೋ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಾಯಿ ಗಾಂವಕರ, ಬೆಳಕು ಸಂಸ್ಥೆ ಅಧ್ಯಕ್ಷ ನಾಗರಾಜ ನಾಯಕ, ಆಶ್ರಯ ಫೌಂಡೇಶನ್ ಅಧ್ಯಕ್ಷ ರಾಜೀವ ಗಾಂವಕರ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜೇಂದ್ರ ಎಲ್. ಭಟ್, ತಾ. ಪಂ. ಮಾಜಿ ಸದಸ್ಯ ಮಹೇಶ ಶೆಟ್ಟಿ, ಭದ್ರಕಾಳಿ ಕಾಲೇಜು ಪ್ರಾಂಶುಪಾಲ ಎಸ್. ಸಿ. ನಾಯಕ, ಭದ್ರಕಾಳಿ ಪ್ರೌಢಶಾಲೆ ಮುಖ್ಯಾಧ್ಯಾಪಕ ಸಿ. ಜಿ. ನಾಯಕ ಇದ್ದರು.

RELATED ARTICLES  ಓದುವ ಆನಂದ ದಕ್ಕಿಸಿಕೊಳ್ಳಿ -ಎಂ.ಎಂ.ಹೆಗಡೆ

ಕರ್ನಾಟಕ ಸರ್ಕಾರ, ಜಿ. ಪಂ. ಉತ್ತರಕನ್ನಡ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕುಮಟಾ ಹಾಗೂ ಬೆಲೆಗದ್ದೆ ಸರ್ಕಾರಿ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಈ ಕ್ರೀಡಾಕೂಟವು ನೆರವೇರಿತು.