ಗೋಕರ್ಣ : ಎಷ್ಟೇ ಮುನ್ನೆಚ್ಚರಿಕೆ ನೀಡಿದರೂ ಪ್ರವಾಸಿಗರು ಸಮುದ್ರದಲ್ಲಿ ಅವಘಡ ಮಾಡಿಕೊಳ್ಳುತ್ತಿರುವ ಪ್ರಕರಣಗಳು ಮತ್ತೆ ಮತ್ತೆ ವರದಿಯಾಗುತ್ತಿದೆ. ಸಮುದ್ರದಲ್ಲಿ ಈಜಲು ಹೋಗಿದ್ದ ವೇಳೆ ಮುಳುಗುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಪ್ರವಾಸಿಗರನ್ನ ರಕ್ಷಣೆ ಮಾಡಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಗೋಕರ್ಣದ ಮುಖ್ಯ ಕಡಲತೀರದಲ್ಲಿ ನಡೆದಿದೆ.
ಋತುರಾಜ್(26), ಶ್ರೀಖಾಂಚು ಗುಪ್ತಾ(28), ಪ್ರಶಾಂತ ಚಂದ್ರಶೇಖರ್(28), ಆರುಷಿ ಬನ್ಸಾಲ್(27), ರೀತು ಪರ್ಹಾದಾಸ್ ಎಂಬುವವರೆ ರಕ್ಷಣೆಗೊಳಗಾದ ಪ್ರವಾಸಿಗರಾಗಿದ್ದಾರೆ. ಗೋಕರ್ಣಕ್ಕೆ ಪ್ರವಾಸಕ್ಕೆಂದು ಬಂದಿದ್ದ ಬೆಂಗಳೂರಿನ ಉದ್ಯೋಗಿಗಳಾಗಿದ್ದು, ಸಮುದ್ರದಲ್ಲಿ ಈಜಾಡುವಾಗ ಅಲೆಗಳ ಹೊಡೆತಕ್ಕೆ ಸಿಕ್ಕು ಮುಳುಗುತ್ತಿದ್ದರು. ಇವರನ್ನ ನೋಡಿದ ಲೈಫ್‌ಗಾರ್ಡ್ ಸಿಬ್ಬಂದಿಯಿಂದ ಪ್ರವಾಸಿಗರ ರಕ್ಷಣೆ ಮಾಡಲಾಗಿದೆ.
ಅಸ್ವಸ್ಥಗೊಂಡಿದ್ದ ಪ್ರವಾಸಿಗರಿಗೆ ಗೋಕರ್ಣ ಪಿಹೆಚ್‌ಸಿಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಸ್ಥಳಕ್ಕೆ ಗೋಕರ್ಣ ಪೊಲೀಸ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗೋಕರ್ಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ